November 3, 2026
Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯವಾಣಿಜ್ಯ/ಉದ್ಯಮಸ್ಥಳೀಯ/ಪ್ರಾದೇಶಿಕ ಸುದ್ದಿ

ಪೊಳಲಿ: ಕ್ಷೇತ್ರದಲ್ಲಿ ₹1.50 ಕೋಟಿ ವೆಚ್ಚದಲ್ಲಿ ಗೋಶಾಲೆ ನಿರ್ಮಾಣಕ್ಕೆ ಸಿದ್ಧತೆ;

ವರದಿ/ ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವತಿಯಿಂದ ಫಲ್ಗುಣಿ ನದಿ ತಟದ ಪಡ್ಯಾಪುವಿನ 15 ಎಕರೆ ಪ್ರದೇಶದಲ್ಲಿ ₹1.50 ಕೋಟಿ ವೆಚ್ಚದಲ್ಲಿ ಗೋಶಾಲೆ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ. ಕಾಮಗಾರಿಯ ಭೂಮಿಪೂಜೆಯನ್ನು ಶೀಘ್ರದಲ್ಲೇ ನೆರವೇರಿಸಲು ಉದ್ದೇಶಿಸಲಾಗಿದೆ.

ಈ ಯೋಜನೆಗೆ ಸಂಬಂಧಿಸಿದಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗೋಶಾಲೆಯ ನಿರ್ಮಾಣ ಕಾಮಗಾರಿಯ ನೀಲನಕ್ಷೆಯನ್ನು ಪರಿಶೀಲಿಸಿ, ಕಾಮಗಾರಿ ಆರಂಭಿಸುವ ಕುರಿತು ಚರ್ಚಿಸಲಾಯಿತು.

ಯೋಜನೆಯಡಿ ಗೋಶಾಲೆಯೊಂದಿಗೆ ಸ್ನಾನಘಟ್ಟ, ಕಾರ್ಮಿಕರಿಗೆ ವಸತಿ ವ್ಯವಸ್ಥೆಹಾಗೂ ಗೋದಾಮು ನಿರ್ಮಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಪ್ಪಂದವೂ ಅಂತಿಮಗೊಂಡಿದೆ.

ಕಾಮಗಾರಿ ಆರಂಭಿಸಲು ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ.ಸಭೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಕಾರ್ಯನಿರ್ವಹಣಾಧಿಕಾರಿ ಚಂದ್ರಮೋಹನ್, ಇಂಜಿನಿಯರ್ ಲಕ್ಷ್ಮಣ್ ಪೂಜಾರಿ ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು

Related posts

ಉಡುಪಿ: ಅಪಘಾತದಲ್ಲಿ ಸಮಾಜ ಸೇವಕ, ಆಟೋ ಚಾಲಕ ಸುನಿಲ್ ಬೈಲಕೇರೆ (45) ನಿಧನ! ;

Voiceoftulunadu

ದೊಡ್ಡಣಗುಡ್ಡೆ ಶ್ರೀ ರಮಾನಂದ ಗುರೂಜಿ ಅವರಿಗೆ ಸಮ್ಮಾನ: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ನಯನ ರಂಗಮಂದಿರದಲ್ಲಿನಡೆದ ಸನ್ಮಾನ ;

Voiceoftulunadu

ಬಿಟ್‌ಕಾಯಿನ್ ಹಗರಣದಲ್ಲಿ ನಲಪಾಡ್ ಪಾಲುದಾರ; ಸ್ನೇಹಿತರ ಮೂಲಕ ಮುಂಬೈನಲ್ಲಿ ನಗದೀಕರಣ – SIT ಚಾರ್ಜ್‌ಶೀಟ್

voiceoftulunadu

Leave a Comment