ವರದಿ /ಚಿತ್ರ : ರೋನ್ಸ್ ಬಂಟ್ವಾಳ್
ಮುಂಬಯಿ /ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ವಿಜಯವಾಣಿ ವರದಿಗಾರ ಪಿ.ಬಿ.ಹರೀಶ್ ರೈ ಅವರ ಧರ್ಮಪತ್ನಿ ಶ್ರೀಮತಿ ಉಷಾ ಕುಮಾರಿ (56.) ಶನಿವಾರ ಸಂಜೆ ಮಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಸೈಂಟ್ ಅಲೋಸಿಯಸ್ ಹೈಸ್ಕೂಲ್ ಮಂಗಳೂರಿನ ಇಲ್ಲಿ ೨೮ ವರ್ಷಗಳ ಕಾಲ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ್ದ ಅವರು ಆ ಮೊದಲು ಚಿನ್ಮಯ ಹೈಸ್ಕೂಲ್ ಮಂಗಳೂರು ಮತ್ತು ಉಳ್ಳಾಲ ಅಲ್ಲಿನ ಭಾರತ್ ಹೈಸ್ಕೂಲ್ನಲ್ಲಿಯೂ ಕಾರ್ಯನಿರ್ವಹಿಸಿದ್ದರು. ಕೆಲಸಮಯದಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಅವರು ಪತಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳೂರುನಲ್ಲಿ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ.
ಉಷಾ ಕುಮಾರಿ ನಿಧನಕ್ಕೆ ಕರ್ನಾಟಕದ ಮಾಜಿ ವಿಧಾನಸಭಾಧ್ಯಕ್ಷ ಹಾಲಿ ಸಚಿವ ಯು.ಟಿ ಖಾದರ್, ಕನ್ನಡಿಗ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಹಾರಾಷ್ಟ್ರ ಘಟಕದ ನಿಕಟಪೂರ್ವ ಅಧ್ಯಕ್ಷ ರೋನ್ಸ್ ಬಂಟ್ವಾಳ್, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಮಾಜಿ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕೆಯುಡಬ್ಲ್ಯೂಜೆ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಡಾ| ಶಿವ ಮೂಡಿಗೆರೆ ಸೇರಿದಂತೆ ನೂರಾರು ಗಣ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
