November 4, 2026
Uncategorizedಜಿಲ್ಲಾ ಸುದ್ದಿರಾಜಕೀಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರು ಆರ್ಥಿಕ ಸಬಲೀಕರಣ –ಸೊರಕೆ : ಪಲಿಮಾರು ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಗ್ಯಾರಂಟಿ ಸಂಭ್ರಮೋತ್ಸವ ;

ವರದಿ/ ಚಿತ್ರ: ಈ ಮೀಡಿಯಾ

ಪಲಿಮಾರು: ಕಳೆದ ಚುನಾವಣಾ ಸಂದರ್ಭದಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಳೆದ ಮೂರುವರೆ ವರ್ಷಗಳಿಂದ ಪಕ್ಷಬೇಧ ಮರೆತು ಯಾರು ಅರ್ಹರಿದ್ದಾರೆ ಅವರ ಖಾತೆಗೆ ಈಗಾಗಲೇ 70,000 ರೂಪಾಯಿ ಜಮೆಯಾಗಿದೆ ಎಂದು ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಹೇಳಿದರು.

ಫಲಿಮಾರು ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಫಲಿಮಾರು ಗ್ರಾಮ ಪಂಚಾಯತ್ ಎದುರುಗಡೆ ನಡೆದ ಗ್ಯಾರಂಟಿ ಸಂಭ್ರಮೋತ್ಸವ ಮಾತನಾಡುತ್ತಾ ಪ್ರಧಾನ ಮಂತ್ರಿಯವರ ಗ್ಯಾರಂಟಿ ಯೋಜನೆಯ ಬಗ್ಗೆ ಸರಕಾರ ದಿವಾಳಿಯಾಗುತ್ತದೆ, ಖಜಾನೆ ಖಾಲಿಯಾಗುತ್ತದೆ ಎನ್ನುವಟೀಕೆ ಮಾತುಗಳನ್ನಾಡಿದರು.ಆದರೆ ದೇಶಾದ್ಯಂತ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರದೆ ದೇಶದ 22 ಲಕ್ಷ ಉದ್ದಿಮೆದಾರರ ಸಾಲ ಮನ್ನಾ ಮಾಡಿದ್ದೇ ಇವರ ದೊಡ್ಡ ಸಾಧನೆ.

ಇದನ್ನು ಜನರು ಅರ್ಥಮಾಡಿಕೊಳ್ಳಬೇಕು ಎಂದು ಸೊರಕೆ ಹೇಳಿದರು.ಕೆ.ಪಿ.ಸಿ.ಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿಯವರು ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಲಿಮಾರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಯಶವಂತ್ ಫಲಿಮಾರು ವಹಿಸಿದ್ದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲ್, ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ, ತಾಲೂಕು ಅಧ್ಯಕ್ಷರಾದ ಗ್ಯಾರಂಟಿ ಸಮಿತಿಯ ನವೀನ್ ಚಂದ್ರಸುವರ್ಣ, ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿತೇಂದ್ರ ಫುರ್ಟಾಡೋ, ಹಿರಿಯನಾಯಕರಾದ ಎಮ್.ಪಿ ಮೊಯ್ಲಿನಬ್ಬ, ನಿಯಾಝ್ ಪಡುಬಿದ್ರಿ, ಗೋಪಾಲ್ ಪೂಜಾರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ದಿನೇಶ್ ಕೋಟ್ಯಾನ್, ನವೀನ್ ಎನ್ ಶೆಟ್ಟಿ, ರಮೀಝ್ ಹುಸೇನ್, ವಿಜಯ ಜೆ ಶೆಟ್ಟಿ ರವರು, ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಶರತ್ ಕುಮಾರ್ ಅಡ್ಡೆ, ಮ್ಯಾಕ್ಸಿಮ್ ಡಿಸೋಜ ನಿರೂಪಿಸಿದರು.

Related posts

ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಸ್ವಾತಂತ್ರೋತ್ಸವ ಆಚರಣೆ: ಧ್ವಜಾರೋಹಣ ನೆರವೇರಿಸಿದ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ;

Voiceoftulunadu

ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿದ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್:

voiceoftulunadu

ಉಡುಪಿ: ಐಎಂಎ ವತಿಯಿಂದ ಕೌಟುಂಬಿಕ ಸಭೆ; ಪ್ರತಿಭಾ ಪ್ರದರ್ಶನ, ಬಹುಮಾನ ವಿತರಣೆ , ಖ್ಯಾತ ಜಾದೂಗಾರ ಕುದ್ರೋಳಿ ಗಣೇಶ್ ರವರಿಂದ ಜಾದೂ ಪ್ರದರ್ಶನ ಕಾರ್ಯಕ್ರಮದ ಹೈಲೈಟ್;

Voiceoftulunadu

Leave a Comment