November 4, 2026
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸ

ಕ್ಯಾಲಿಫೋರ್ನಿಯಾದ ತುಳುವ ಮಹಾಸಭೆಯ ಅಧ್ಯಕ್ಷೆಯಾಗಿ ಅನಿತಾ ನಾಯಕ್ ನೇಮಕ ;

ಕ್ಯಾಲಿಫೋರ್ನಿಯಾ (ಅಮೆರಿಕ): ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸಂರಕ್ಷಣೆ ಮತ್ತು ಜಾಗತಿಕ ಮಟ್ಟದಲ್ಲಿ ತುಳುವರನ್ನು ಸಂಘಟಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಅನಿತಾ ನಾಯಕ್ ಅವರನ್ನು ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಕ್ಯಾಲಿಫೋರ್ನಿಯಾ ಘಟಕದ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ.

ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಅಂತರರಾಷ್ಟ್ರೀಯ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ ಅವರು ಈ ನೇಮಕಾತಿಯನ್ನು ಪ್ರಕಟಿಸಿದ್ದಾರೆ.ಕಳೆದ ಮೂರು ದಶಕಗಳಿಂದ ಸಾಮಾಜಿಕ ಸೇವೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅನಿತಾ ನಾಯಕ್ ಅವರು ವೃತ್ತಿಯಲ್ಲಿ ಜಾಗತಿಕ ತಂತ್ರಜ್ಞಾನ ಯೋಜನೆಗಳ ನೇತೃತ್ವ ವಹಿಸಿರುವ ಅನುಭವಿ ಸಾಫ್ಟ್‌ವೇರ್ ಎಂಜಿನಿಯರಿಂಗ್ ಕ್ಷೇತ್ರದ ವೃತ್ತಿಪರರಾಗಿದ್ದಾರೆ.

ಅಮೆರಿಕದ ವಿವಿಧ ಲಾಭರಹಿತ ಸಂಸ್ಥೆಗಳ ಕಾರ್ಯಕಾರಿ ಸಮಿತಿಗಳಲ್ಲಿ ಸೇವೆ ಸಲ್ಲಿಸಿರುವ ಅವರು, ಪ್ರಮಾಣೀಕೃತ ಯೋಗ ಶಿಕ್ಷಕಿ ಹಾಗೂ ಆಯುರ್ವೇದ ಜೀವನಶೈಲಿ ಸಲಹೆಗಾರ್ತಿಯಾಗಿಯೂ ಗುರುತಿಸಿಕೊಂಡಿದ್ದಾರೆ.ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಅಮೆರಿಕದಲ್ಲಿ ಬೆಳೆಸುವ ಉದ್ದೇಶದಿಂದ 2021ರಲ್ಲಿ ಕ್ಯಾಲಿಫೋರ್ನಿಯಾದಲ್ಲಿ ‘ತುಳಸಿ ತುಳು ಕೂಟ’ (Tulsi Tulu Koota) ಸಂಸ್ಥೆಯನ್ನು ಸ್ಥಾಪಿಸಿದ ಅವರು, ವಿವಿಧ ತಲೆಮಾರುಗಳ ತುಳುವರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಸ್ತುತ 270ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಈ ಸಂಸ್ಥೆಯ ಮೂಲಕ ಬಿಸು, ಕೊರಲ್ ಪರ್ಬ, ಪುದ್ದರ್ ಸೇರಿದಂತೆ ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳನ್ನು ವಿದೇಶದಲ್ಲಿಯೂ ಪರಿಚಯಿಸುವ ಕಾರ್ಯ ನಡೆಯುತ್ತಿದೆ.ಇದಲ್ಲದೆ, ಆಲ್ ಅಮೆರಿಕಾ ತುಳು ಅಸೋಸಿಯೇಷನ್ (AATA) ಸಂಸ್ಥೆಯ ಮಾಜಿ ಕ್ಯಾಲಿಫೋರ್ನಿಯಾ ರಾಯಭಾರಿಯಾಗಿ ಹಾಗೂ ಪ್ರಸ್ತುತ ಆಡಳಿತ ಮಂಡಳಿಯ ಸದಸ್ಯೆಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.

ವಿಶ್ವದ ಮೊದಲ ಆನ್‌ಲೈನ್ ತುಳು ಗ್ರಂಥಾಲಯವೆಂದು ಗುರುತಿಸಲಾದ ‘ರಾಣಿ ಅಬ್ಬಕ್ಕ ಗೇಣದ ಚಾವಡಿ’ ಯೋಜನೆಯ ಪರಿಕಲ್ಪನೆ ಮತ್ತು ಅನುಷ್ಠಾನದಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಯೋಜನೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ನಿಟ್ಟೆ ವಿಶ್ವವಿದ್ಯಾಲಯದ ತುಳು ಕೇಂದ್ರದ ಸಹಕಾರ ದೊರಕಿಸುವಲ್ಲಿ ಶ್ರಮಿಸಿದ್ದಾರೆ.

ಅನಿತಾ ನಾಯಕ್ ಅವರ ಈ ನೇಮಕಕ್ಕೆ ತುಳುವರ್ಲ್ಡ್ ಫೌಂಡೇಶನ್‌ನ ಗೌರವಾಧ್ಯಕ್ಷ ಶ್ರೀ ಶ್ರೀಹರಿನಾರಾಯಣದಾಸ ಅಸ್ರಣ್ಣ ಕಟೀಲ್, ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ಪ್ರಧಾನ ಕಾರ್ಯದರ್ಶಿ ವಸಂತ ರೈ ಕುತ್ತೆತ್ತೂರು, ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವ, ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಗಡೆ ಕೊಕ್ರಾಡಿ, ಕೇಂದ್ರೀಯ ಸಮಿತಿ ಅಧ್ಯಕ್ಷ ಡಾ. ಅವಿನ್ ಬಿ.ಆರ್. ಆಳ್ವ ಹಾಗೂ ಪ್ರಧಾನ ಸಂಚಾಲಕ ವಿಶ್ವನಾಥ ಆಚಾರ್ಯ ಅಭಿನಂದನೆ ಸಲ್ಲಿಸಿದ್ದಾರೆ.

ವಿದೇಶದಲ್ಲಿ ತುಳು ಭಾಷೆ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಅನಿತಾ ನಾಯಕ್ ಅವರ ನಾಯಕತ್ವ ಮತ್ತಷ್ಟು ಬಲ ತುಂಬಲಿದೆ ಎಂಬ ಆಶಯವನ್ನು ಗಣ್ಯರು ವ್ಯಕ್ತಪಡಿಸಿ, ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದ್ದಾರೆ.

Related posts

ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026 : ಪೇಜಾವರ ಶ್ರೀ ಭೇಟಿ ಮಾಡಿದ ಬಿ ಎಲ್ ಸಂತೋಷ್, ಸಂಸದೆ ಬಾನ್ಸುರಿ ಸ್ವರಾಜ್‌;

Voiceoftulunadu

ಬಂಟಕಲ್ಲು ದುರ್ಗಾಪರಮೇಶ್ವರಿ ದೇಗುಲದ ಸಭಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ ಮಂಜೂರಾತಿ ಪತ್ರ ಹಸ್ತಾಂತರಿಸಿದ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ;

Voiceoftulunadu

ಉಡುಪಿ ಪ್ರಕೃತಿ ಲಯನ್ಸ್ ಕ್ಲಬ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ.ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಶೀರೂರು ಆಯ್ಕೆ;

Voiceoftulunadu

Leave a Comment