November 3, 2026
Uncategorizedಜಿಲ್ಲಾ ಸುದ್ದಿರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಜಿಲ್ಲೆಯಲ್ಲಿ ಕುಸುಮ್-ಸಿ ಯೋಜನೆ ಅನುಷ್ಠಾನ ವಿಳಂಬ: ಸಿಎಂ ಡಿ.ಕೆ.ಶಿಗೆ ಸಂಸದ ಕೋಟ ದೂರು : ಉಚ್ಚಿಲದಲ್ಲಿ ದೂರು ನೀಡಿದ ಸಂಸದ ಕೋಟ ;

ವರದಿ /ಚಿತ್ರ : ಈ ಮೀಡಿಯಾ

ಉಚ್ಚಿಲ: ಉಡುಪಿ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ (Kusum -C) ಕುಸುಮ್-ಸಿ ಯೋಜನೆಯ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ಮರಗಳ ತೆರವು ಪ್ರಕ್ರಿಯೆಯಲ್ಲಿನ ವಿಳಂಬ ಗಂಭೀರವಾಗಿ ಅಡ್ಡಿಯಾಗಿರುವುದನ್ನು ಪರಿಗಣಿಸಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಈ ಕುರಿತು ಉಚ್ಚಿಲಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಕುಸುಮ್-ಸಿ ಯೋಜನೆಯಡಿ ತಾಲೂಕಿನ ಬೈಂದೂರುಕಿರಿಮಂಜೇಶ್ವರದಲ್ಲಿ 13 ಎಕರೆ, ಬ್ರಹ್ಮಾವರ ತಾಲ್ಲೂಕಿನ ಕಾವಡಿಯಲ್ಲಿ 7.5 ಎಕರೆ ಹಾಗೂ ಕಾಪು ತಾಲ್ಲೂಕಿನ ಬೆಳ್ಳೆ ಗ್ರಾಮದಲ್ಲಿ 10 ಎಕರೆ ಜಾಗವನ್ನು ಸೌರ ವಿದ್ಯುತ್ ಘಟಕಗಳ ಸ್ಥಾಪನೆಗಾಗಿ ಗುರುತಿಸಲಾಗಿದೆ.ಮುಖ್ಯ ಕಾರ್ಯದರ್ಶಿಯವರು ಅರಣ್ಯಾಧಿಕಾರಿಗಳಿಗೆ ಸ್ವತಃ ನಿರ್ದೇಶನ ನೀಡಿ, ಸಮಸ್ಯೆ ಪರಿಹಾರ ಮಾಡುವಂತೆ ನಿರ್ದೇಶಿಸಿದ್ದರು.

ಮತ್ತು ರಾಜ್ಯ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಬಂಧಪಟ್ಟ ಹಿರಿಯ ಅಧಿಕಾರಿಗಳನ್ನು ಯೋಜನೆಗೆ ಭೇಟಿಯಾಗಿ ಎದುರಾಗಿರುವ ಅಡೆತಡೆಗಳನ್ನು ನಿವಾರಿಸುವಂತೆ ಮನವಿ ಮಾಡಲಾಗಿತ್ತು. ಇದಲ್ಲದೆ,ಜಿಲ್ಲಾಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಐದಕ್ಕಿಂತಲೂ ಹೆಚ್ಚು ಬಾರಿ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗಿದೆ.

ಆಡಳಿತಾತ್ಮಕ ವಿಳಂಬದಿಂದ ಕೇಂದ್ರ ಸರ್ಕಾರದ ಸುಮಾರು ₹22 ಕೋಟಿ ವೆಚ್ಚದ ಯೋಜನೆಗೆ ಮತ್ತಷ್ಟು ಹಿನ್ನಡೆಯಾಗದಂತೆ ಹಾಗೂ ಜಿಲ್ಲೆಯ ರೈತರಿಗೆ ಯೋಜನೆಯ ಪ್ರಯೋಜನ ಸಕಾಲದಲ್ಲಿ ದೊರೆಯುವಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರನ್ನು ಮತ್ತೊಮ್ಮೆ ಲಿಖಿತ ದೂರಿನ ಮೂಲಕ ಆಗ್ರಹಿಸಿದ್ದಾರೆ.

Related posts

ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ: ತಾಲೂಕು ಕಚೇರಿಗಳಿಗೆ ಲೋಕಾ ದಾಳಿ ;

Voiceoftulunadu

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಿದ ರೋಹನ್ ಕಾರ್ಪೊರೇಷನ್ ;

Voiceoftulunadu

ಶತಮಾನೋತ್ಸವ ಆಚರಿಸುತ್ತಿರುವ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ : ಯುಕೆ ಘಟಕದ ಅಧ್ಯಕ್ಷರಾಗಿ ಶ್ರೀ ಚಂದ್ರಹಾಸ ಹೆಗ್ಡೆ ನೇಮಕ ;

Voiceoftulunadu

Leave a Comment