September 5, 2026
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಹಣದ ದುರ್ಬಳಕೆ: ಕಾಪುವಿನಲ್ಲಿ ಕಾಂಗ್ರೆಸ್ ಜಾಥಾ, ಪ್ರತಿಭಟನಾ ಸಭೆಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆ;

ವರದಿ/ ಚಿತ್ರ: ಈ ಮೀಡಿಯಾ

ಕಾಪು : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಹುಂಡಿ ಹಣದ ದುರ್ಬಳಕೆ ನಡೆದಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಟ್ರಸ್ಟಿಗಳು, ಸಿಬ್ಬಂದಿ ಹಾಗೂ ಪರೋಕ್ಷವಾಗಿ ಸಹಕರಿಸಿದವರ ವಿರುದ್ಧ ಸ್ವತಂತ್ರ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಸಂಜೆ ಕಾಪುವಿನಲ್ಲಿ ಬೃಹತ್ ಪ್ರತಿಭಟನಾ ಜಾಥಾ ಮತ್ತು ಸಭೆ ನಡೆಯಿತು.

ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಸಾವಿರಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರುಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಮುಂಭಾಗದಿಂದ ಕಾಪು ಪೇಟೆಯವರೆಗೆ ರಾಮ ದೇವರ ಭಜನೆ ಮತ್ತು ದೊಂದಿ ಬೆಳಕಿನ ಪ್ರದರ್ಶನದೊಂದಿಗೆ ಮೆರವಣಿಗೆ ನಡೆಸಿದರು.ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆಡಳಿತ ಮೊತ್ತೇಸರ ನಡಿಕೆರೆ ರತ್ನಾಕರ ಶೆಟ್ಟಿ ಮೆರವಣಿಗೆಗೆ ಚಾಲನೆ ನೀಡಿದರು.

ಲಕ್ಷ್ಮೀಶ ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಾಗ್ನಿಗಳಾದ ಉಬ್ಬರಡ್ಕ, ಸುಧೀರ್ ಮುರೊಳ್ಳಿ ದಿಕ್ಕೂಚಿ ಮಾಡಿದರು.

ಕುಮಾರ್ ಭಾಷಣಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಪಕ್ಷದ ಮುಖಂಡರಾದ ಕಾಪು ದಿವಾಕರ ಶೆಟ್ಟಿ, ನವೀನ್ ಚಂದ್ರ ಶೆಟ್ಟಿ, ನವೀನ್ ಚಂದ್ರ ಸುವರ್ಣ, ಶಿವಾಜಿ ಸುವರ್ಣ, ಪ್ರಶಾಂತ್ ಜತ್ತನ್ನ, ನವೀನ್ ಎನ್. ಶೆಟ್ಟಿ, ಸರಸು ಡಿ. ಬಂಗೇರ, ರಾಜೇಶ್ ರಾವ್ ಪಾಂಗಾಳ, ಸುನೀಲ್ ಬಂಗೇರ, ವಿಕ್ರಂ ಕಾಪು, ಅಬ್ದುಲ್ ಅಜೀಜ್, ಶಾಂತಲತಾ ಶೆಟ್ಟಿ, ಮಹಮ್ಮದ್ ನಿಯಾಝ್ ಪುರಸಭೆ ಸದಸ್ಯರು, ಮಾಜಿ ಜನಪ್ರತಿನಿಧಿಗಳು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Related posts

ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರಿಂದ ಬೆಳ್ತಂಗಡಿಯಲ್ಲಿನ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಸಮಾರಂಭ:

Voiceoftulunadu

ಗೋವಿನತೋಟ :ಇಂದಿನಿಂದ ಶ್ರೀ ರಾಧಾಸುರಭಿ ಗೋ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಪ್ತಾಹ-2026 ;

Voiceoftulunadu

ಉದ್ಯಮಿ, ಧಾರ್ಮಿಕ-ಸಾಮಾಜಿಕ ಮುಖಂಡ ಸಖೇಂದ್ರ ಸುವರ್ಣ ಹೃದಯಾಘಾತದಿಂದ ನಿಧನ ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು;

Voiceoftulunadu

Leave a Comment