November 5, 2026
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆಳ್ವಾಸ್ ವೈದ್ಯಕೀಯ ಕಾಲೇಜಿಗೆ ತುಳು ಅಲ್ಪಸಂಖ್ಯಾತ ಮಾನ್ಯತೆ : 150 ಎಮ್‌ಬಿಬಿಎಸ್ ಸೀಟುಗಳ ಪೈಕಿ ತುಳು ಭಾಷಿಕ ಅಲ್ಪಸಂಖ್ಯಾತರಿಗೆ 54 ಸೀಟುಗಳು ;

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗಸಂಸ್ಥೆಯಾದ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್‌ಗೆ ತುಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ಕೋಟಾದಡಿ ಅನುಮೋದನೆ ದೊರೆತಿದೆ.

2026–27ನೇ ಶೈಕ್ಷಣಿಕ ವರ್ಷಕ್ಕೆ ಒಟ್ಟು 150 ಎಮ್‌ಬಿಬಿಎಸ್ ಸೀಟುಗಳಿಗೆ ಮಂಜೂರಾತಿ ದೊರೆತಿದ್ದು, ಈ ಪೈಕಿ 54 ಸೀಟುಗಳು ತುಳು ಭಾಷಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ. ತುಳು ಸಮುದಾಯದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ.

ವಿಶೇಷವಾಗಿ ಕರಾವಳಿ ಕರ್ನಾಟಕದ ತುಳು ಭಾಷಿಕ ವೈದ್ಯಕೀಯ ಶಿಕ್ಷಣದ ಆಕಾಂಕ್ಷಿಗಳಿಗೆ ತಮ್ಮದೇ ನೆಲದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಇದು ಉತ್ತಮ ಅವಕಾಶವಾಗಲಿದೆ.ವೈದ್ಯಕೀಯ ಶಿಕ್ಷಣದ ಗುಣಮಟ್ಟದೊಂದಿಗೆ ಪ್ರಾಯೋಗಿಕ ಹಾಗೂ ಕ್ಲಿನಿಕಲ್ ತರಬೇತಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನೂ ಸಂಸ್ಥೆ ಹೊಂದಿದೆ.

ಆಳ್ವಾಸ್ ವೈದ್ಯಕೀಯ ವ್ಯವಸ್ಥೆಯಡಿ 650 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿದ್ದು, ಎಮ್‌ಬಿಬಿಎಸ್ ವಿದ್ಯಾರ್ಥಿಗಳಿಗೆ ವಿವಿಧ ವೈದ್ಯಕೀಯ ವಿಭಾಗಗಳಲ್ಲಿ ಪ್ರಾಯೋಗಿಕ ಅನುಭವ ಹಾಗೂ ಕ್ಲಿನಿಕಲ್ ತರಬೇತಿ ಪಡೆಯಲು ಇದು ನೆರವಾಗಲಿದೆ. ವಿದ್ಯಾರ್ಥಿಗಳ ವಸತಿ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಆಕಾಂಕ್ಷಿಗಳಿಗೆ ಅವಕಾಶ ವೈದ್ಯಕೀಯ ಶಿಕ್ಷಣದ ಕನಸು ಹೊಂದಿರುವ ತುಳು ಭಾಷಿಕ ಅಲ್ಪಸಂಖ್ಯಾತ ಸಮುದಾಯದ ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಪ್ರವೇಶಕ್ಕೆ ಸಂಬಂಧಿಸಿದ ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಪ್ರವೇಶ ಪ್ರಕ್ರಿಯೆಯ ಕುರಿತು ಅಭ್ಯರ್ಥಿಗಳು ಅಧಿಕೃತ ಮಾಹಿತಿಯನ್ನು ಪರಿಶೀಲಿಸಿ, ನಿಗದಿತ ನಿಯಮಾನುಸಾರ ಅರ್ಜಿ ಸಲ್ಲಿಸಬಹುದಾಗಿದೆ.

Related posts

ಚೆಢಾನಗರ್‌ನ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಶ್ರೀ ಸುಬ್ರಹ್ಮಣ್ಯ ಸೇವಾ ಸಂಘದ ವಾರ್ಷಿಕ ಸಭೆ ಸಮುದಾಯದ ಹಿತಕ್ಕಾಗಿ ನಿರಂತರ ಸೇವೆ ಅವಶ್ಯ : ಕೆ.ಸುಬ್ಬಣ್ಣ ರಾವ್ ;

Voiceoftulunadu

ಉಡುಪಿ: ₹110 ಕೋಟಿ ನೂತನ ಜಿಲ್ಲಾ ಆಸ್ಪತ್ರೆಗೆ ಹಳೆಯ ಪರಿಕರ ವರ್ಗಾವಣೆ ವಿರೋಧ – ತುಳುನಾಡ ರಕ್ಷಣಾ ವೇದಿಕೆಯಿಂದ ಮನವಿ ;

Voiceoftulunadu

ಎಸ್‌ಐಆರ್‌ ಕುರಿತು ಗೊಂದಲ ಬೇಡ, ಜಾಗೃತಿ ಇರಲಿ: ವಕೀಲ ಇರ್ಷಾದ್‌ ಕಿನ್ನಿಗೋಳಿ;

Voiceoftulunadu

Leave a Comment