28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ, ಸಮಾನ ಮನಸ್ಕ ತಂಡ ಉಡುಪಿ ಸಹಯೋಗದ ಕಾರ್ಯಕ್ರಮ;

ವರದಿ/ ಚಿತ್ರ: ಈ ಮೀಡಿಯಾ

ಉಡುಪಿ: ಉಳ್ಳೂರು ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಹಾಗೂ ಸಮಾನ ಮನಸ್ಕ ತಂಡ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಕೊಡಮಾಡಿದ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮ ಯಶಸ್ವಿಯಾಗಿ ಮೂಡಿ ಬಂತು.ಕಲಿಕೆ ಎನ್ನುವುದು ಮಾನವನ ಸಾಧನೆಯ ದಾರಿಯ ಪೂರಕ ವ್ಯವಸ್ಥೆ. ಸಹಕಾರ ನೀಡುವುದು ಸಾಮಾಜಿಕ ಧರ್ಮ ಎಂದು ಪುಸ್ತಕ ವಿತರಣೆ ಮಾಡಿ ಸಮಾನ ಮನಸ್ಕ ತಂಡ ಕಟ್ಟಿ ಹಲವಾರು ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡ ನಿಸ್ವಾರ್ಥ ಸೇವಕ ಶಶಿಧರ್ ಪುರೋಹಿತ್ ಹೇಳಿದರು.

ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಒಂದರಿಂದ ಹತ್ತನೇ ತರಗತಿಯ ಸುಮಾರು 40 ವಿದ್ಯಾರ್ಥಿಗಳು ಉಚಿತ ಪುಸ್ತಕ ಮತ್ತು ಕಲಿಕಾ ಸಾಮಗ್ರಿಗಳನ್ನು ಪಡೆದುಕೊಂಡರು.ಅತಿಥಿಗಳಾಗಿ ಸಮಾನ ಮನಸ್ಕ ತಂಡದ ಸದಸ್ಯರಾದ ದಿವಾಕರ್ ಆಚಾರ್ಯ ಉಡುಪಿ, ಸಂಘದ ಗೌರವ ಸಲಹೆಗಾರರಾದ ಧನಂಜಯ ಆಚಾರ್ಯ, ವಿಶ್ವಕರ್ಮ ಯುವ ಸಂಘಟನೆಯ ಕಾರ್ಯದರ್ಶಿ ಪಾಂಡುರಂಗ ಆಚಾರ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೃಷ್ಣ ಆಚಾರ್ಯ ವಹಿಸಿದ್ದರು.ಸರ್ವರಿಗೂ ಉಪಹಾರದ ವ್ಯವಸ್ಥೆಯನ್ನು ಸ್ಥಳೀಯ ಸಂಘದ ಸದಸ್ಯರಾದ ನಾಗೇಶ್ ಆಚಾರ್ಯ ಮಾಡಿದ್ದರು.ಸಂಘದ ಉಪಾಧ್ಯಕ್ಷರಾದ ಹರೀಶ್ ಆಚಾರ್ಯ ಸರ್ವರಿಗೂ ಸ್ವಾಗತಿಸಿದರು. ಕಾರ್ಯದರ್ಶಿ ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಗುಟ್ಕಾ, ಪಾನ್ ಮಸಾಲಾ, ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಹಿಂಪಡೆತ ತಂಬಾಕು ಬೆಳೆಗಾರರ ಮನವಿ ಹಿನ್ನೆಲೆಯಲ್ಲಿ ಸಿಎಂ ಡಿಕೆಶಿಯವರಿಂದ ಆದೇಶ ಹಿಂಪಡೆಯುವ ಸೂಚನೆ ;

Voiceoftulunadu

ಉಡುಪಿ ಪ್ರಕೃತಿ ಲಯನ್ಸ್ ಕ್ಲಬ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ.ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಶೀರೂರು ಆಯ್ಕೆ;

Voiceoftulunadu

ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿಯಾಗಿ ಈಥನ್ ರಫಾಯೆಲ್ ತೌರೊ ನೇಮಕ

Voiceoftulunadu

Leave a Comment