28.5 C
ಮಂಗಳೂರು
September 4, 2026
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ, ಆ. 1: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ : ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಸ್ಥಳದಲ್ಲೇ ಮೃತ್ಯು ;

ಉಡುಪಿ, ಆ. 1: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ (Lakshmi Manjunath Kol) ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಮಧ್ಯಾಹ್ನ ಉಡುಪಿ ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್‌ನಲ್ಲಿ ನಡೆದಿದೆ.

ಮೃತರಾದ ಲಕ್ಷ್ಮೀ ಮಂಜುನಾಥ್ ಕೊಳ ಅವರು ಬಿಜೆಪಿ ಮುಖಂಡ ಮಂಜು ಕೊಳ ಅವರ ಪತ್ನಿಯಾಗಿದ್ದು, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಉಡುಪಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿ ಅಪಘಾತದ ಕುರಿತು ತನಿಖೆ ಆರಂಭಿಸಲಾಗಿದೆ.

ಅಪಘಾತಕ್ಕೆ ನಿಖರ ಕಾರಣ ಹಾಗೂ ಇತರೆ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

Related posts

ಕಾಪು: ಮೂರು ಮಾರಿಗುಡಿಗಳಲ್ಲಿ ಆಟಿ ಮಾರಿಪೂಜೆ ಸಂಪನ್ನ :ಹಳೆಮಾರಿಯಮ್ಮ ಹೊಸ ಮಾರಿಯಮ್ಮಹಾಗೂ ಕಲ್ಯ ಮಾರಿಯಮ್ಮಗುಡಿ;

Voiceoftulunadu

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಅಮೆರಿಕ ಸಂಯುಕ್ತ ಸಂಸ್ಥಾನ ಅಧ್ಯಕ್ಷರಾಗಿ ಭಾಸ್ಕರ್ ಶೆರಿಗಾರ್ ನೇಮಕ ;

Voiceoftulunadu

ಸಾಸ್ತಾನ ದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ : ಸುಮಾರು 18 ದಿನಗಳ ಕಾಲ ನಡೆಯಲಿರುವ ಪಾದಯಾತ್ರೆ;

Voiceoftulunadu

Leave a Comment