28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ : ಕನ್ನಡ ಪುಸ್ತಕ ಪ್ರಾಧಿಕಾರದಿಂದ ಮನೆಗೊಂದು ಗ್ರಂಥಾಲಯ10 ಗ್ರಂಥಾಲಯಗಳ ಅನುಷ್ಠಾನ ಕಾರ್ಯಕ್ರಮ;

ವರದಿ/ ಚಿತ್ರ: ಈ ಮೀಡಿಯಾ

ಉಡುಪಿ : ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇದರ ವತಿಯಿಂದ ನಡೆಯುತ್ತಿರುವ ಮನೆಗೊಂದು ಗ್ರಂಥಾಲಯ ಅಭಿಯಾನ ಉಡುಪಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಘಟಕದ ಉಡುಪಿ ತಾಲೂಕು ಸಹಯೋಗದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ.

ಒಂದೇ ದಿನ 10 ಗ್ರಂಥಾಲಯ ಅನುಷ್ಠಾನವನ್ನು ಉಡುಪಿಯ ಉದ್ಯಮಿಗಳಾದ ಪ್ರೀತಿ ನಾಯಕ್ ಮತ್ತು ಜನಾರ್ದನ್ ನಾಯಕ್ ದಂಪತಿಗಳ ಮನೆಯಲ್ಲಿ ಚಾಲನೆ ನೀಡಲಾಯಿತು.ಕಾರ್ಯಕ್ರಮವನ್ನು ಅನುಷ್ಠಾನ ಸಮಿತಿ ಜಿಲ್ಲಾ ಸಹ ಸಂಚಾಲಕ ಮತ್ತು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ ಸಂಘಟಿಸಿದರು.ಅವರು ಮಾತನಾಡಿ, ಈಗಾಗಲೇ ಉಡುಪಿ ತಾಲೂಕಿನಲ್ಲಿ “ಮನೆಯೇ ಗ್ರಂಥಾಲಯ” ಅಭಿಯಾನ ಅತ್ಯಂತ ಯಶಸ್ವಿ ಯಾಗಿ ನಡೆಯುತ್ತಿದೆ.

ಇತ್ತೀಚಿಗೆ ನಮ್ಮ ಕಾರ್ಯಕ್ರಮಗಳನ್ನು ಮೆಚ್ಚಿ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಮಾನಸ ಇವರು ಮನೆಗೊಂದು ಗ್ರಂಥಾಲಯ ಅಭಿಯಾನವನ್ನು ಜಿಲ್ಲೆಯಲ್ಲಿ ಅನುಷ್ಠಾನಿಸಲು ನಮಗೆ ಅವಕಾಶನೀಡಿದ್ದಾರೆ.ಇದನ್ನು ಕೂಡ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ ನಾವೆಲ್ಲರೂ ನಿರತರಾಗಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಅನುಷ್ಠಾನ ಸಮಿತಿಯ ಸದಸ್ಯರಾದ ಜನಾರ್ದನ ಕೊಡವೂರು, ರಂಜನಿ ವಸಂತ್, ದೀಪಾ ಚಂದ್ರಕಾಂತ್, ಸಿದ್ದ ಬಸಯ್ಯಸ್ವಾಮಿ ಚಿಕ್ಕಮಠ, ಡಾ. ರಶ್ಮಿ ಅಮ್ಮೆಂಬಳ, ರಾಘವೇಂದ್ರ ಪ್ರಭು ಕರ್ವಾಲು, ಕಸಾಪ ಜಿಲ್ಲಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಂಗಳೂರಿನ ಆರ್ ಟಿ ನಗರದಲ್ಲಿ ಬೇಕರಿಗೆ ಹಲ್ಲೆ, ದಾಂಧಲೆ – ಎಫ್ ಐ ಆರ್ ದಾಖಲು ;

Voiceoftulunadu

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ : ಪಡುಬಿದ್ರಿ ರೋಟರಿ ಕ್ಲಬ್ಬಿನ ನಿಕಟ ಪೂರ್ವ ಅಧ್ಯಕ್ಷ ಹಾಗೂ ಪಡುಬಿದ್ರಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಮಹಮ್ಮದ್ ನಿಯಾಜ್;

Voiceoftulunadu

ಪಡುಬಿದ್ರಿ ಕಡಲು ಕೊರೆತ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ ವಿ ಅಮೀನ್ ಮನವಿ: ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಶ್ವಾಸ್ ವಿ. ಅಮೀನ್;

Voiceoftulunadu

Leave a Comment