28.5 C
ಮಂಗಳೂರು
September 4, 2026
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ : ಉಡುಪಿ ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಯಶ್ವಾಲ್ ಸುವರ್ಣರಿಂದ ಭಾಷಣದ ಹಿನ್ನೆಲೆ;

ವರದಿ /ಚಿತ್ರ: ಈ ಮೀಡಿಯಾ

ಮಂಗಳೂರು/ ಉಡುಪಿ : ಶಾಸಕ ಯತ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ಪ್ರಕರಣದ ఎల్ల ಅಂಶಗಳನ್ನು ಪರಿಶೀಲಿಸಿ ಕಾನೂನಿನ ಅನ್ವಯ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ಕೇಂದ್ರದ ಬಿಜೆಪಿ ನೇತೃತ್ವದ ಮೋದಿ ಸರ್ಕಾರದ ದುರಾಡಳಿತದಿಂದ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಸಂಕಷ್ಟಕ್ಕೆ ತಳ್ಳಿತು. ಈ ದುರ್ಘಟನೆಯಿಂದ ಉಂಟಾದ ಮಾನಸಿಕ ಆಘಾತದ ಪರಿಣಾಮವಾಗಿ 21 ಅಮಾಯಕ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವುದು ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು.

ಈ ಅನ್ಯಾಯದ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗೆ ಬೆಂಬಲ ಸೂಚಿಸಿ, ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಅನ್ನು ಖಂಡಿಸಿಕಾಂಗ್ರೆಸ್ ಪಕ್ಷ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನಿವಾಸದ ಎದುರು ಪ್ರತಿಭಟನೆ ನಡೆಸುವ ಮೂಲಕ ದೇಶದ ವಿದ್ಯಾರ್ಥಿಗಳ ಪರವಾಗಿ ನಿಂತಿದ್ದರು.

ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ನ್ಯಾಯ ಸಮ್ಮತ ಹೋರಾಟಕ್ಕೆ ಬೆಂಬಲ ನೀಡಿದ್ದಕ್ಕಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಶಾಸಕ ಯತ್ಪಾಲ್ ಸುವರ್ಣ ಅವರು “ರಾಹುಲ್ ಗಾಂಧಿ 24 ಗಂಟೆಗಳ ಕಾಲ ಡ್ರಗ್ಸ್ ನಶೆಯಲ್ಲಿರುತ್ತಾರೆ” ಎಂಬ ನಿರಾಧಾರ ಹಾಗೂ ಅವಹೇಳನಕಾರಿ ಆರೋಪ ಮಾಡಿರುವುದು ಮಾತ್ರವಲ್ಲದೆ, “ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುತ್ತೇವೆ” ಎಂದು ಬಹಿರಂಗವಾಗಿ ಬೆದರಿಕೆಯ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ.ಈ ಭಾಷಣದ ವಿಡಿಯೋ ಸಾಕ್ಷ್ಯವೂ ಲಭ್ಯವಿದ್ದು, ಸಂಬಂಧಪಟ್ಟ ತನಿಖಾ ಸಂಸ್ಥೆಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಬೇಕು.

ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡಿದ ನೀಟ್ ಹಗರಣದ ವಿರುದ್ಧ ಧ್ವನಿ ಎತ್ತಿದವರನ್ನೇ ಗುರಿಯಾಗಿಸಿಕೊಂಡು ವೈಯಕ್ತಿಕ ನಿಂದನೆ, ದ್ವೇಷದ ಭಾಷೆ ಹಾಗೂ ಬೆದರಿಕೆಯ ರಾಜಕಾರಣನಡೆಸುತ್ತಿರುವುದು ಬಿಜೆಪಿಯ ಶಿಕ್ಷಣ ವಿರೋಧಿ ಮತ್ತು ಪ್ರಜಾಪ್ರಭುತ್ವ ವಿ ರೋ ಧಿ ಮನೋ ಭಾವವನ್ನು ಮತ್ತೊಮ್ಮೆಬಯಲಿಗೆಳೆದಿದೆ. ದ್ವೇಷದ ಭಾಷೆ ಮತ್ತು ಜೀವ ಬೆದರಿಕೆಯ ಮಾರ್ಗವನ್ನು ಆಯ್ಕೆ ಮಾಡುವುದು ಯಾವುದೇ ರೀತಿಯಲ್ಲೂ ಸಮರ್ಥನೀಯವಲ್ಲ.ದ್ವೇಷಪೂರಿತ ಹಾಗೂ ಪ್ರಚೋದನಕಾರಿ ಹೇಳಿಕೆಗಳು ಕರಾವಳಿ ಜಿಲ್ಲೆಯಲ್ಲಿ ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಅಪಾಯವನ್ನು ಹೊಂದಿವೆ.

ಆದ್ದರಿಂದ ಈ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು.ಈ ಕುರಿತು ರಾಜ್ಯ ಗೃಹ ಸಚಿವರೊಂದಿಗೆ ತುರ್ತಾಗಿ ಚರ್ಚೆ ನಡೆಸಲಿದ್ದು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಪ್ರಕರಣದಲ್ಲಿ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಿದ್ದೇವೆ.

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವದ ಆಧಾರದಲ್ಲಿ ಯಾವುದೇ ಒತ್ತಡಕ್ಕೂ ಮಣಿಯದೆ ತಪ್ಪಿತಸ್ಥರ ವಿರುದ್ಧ ನ್ಯಾಯಸಮ್ಮತ ಹಾಗೂ ಕಠಿಣ ಕ್ರಮ ಜರುಗಲಿದೆ ಎಂಬ ವಿಶ್ವಾಸವನ್ನು ಮಂಜುನಾಥ ಭಂಡಾರಿ ಅವರು ಪತ್ರಿಕಾ ಹೇಳಿಕೆಯಲ್ಲಿ ವ್ಯಕ್ತಪಡಿಸಿದ್ದಾರೆ.

Related posts

ನೇತ್ರಾವತಿ ಜಲಾನಯನ ಪ್ರದೇಶದ ಕೃಷಿ ಹಳ್ಳದಲ್ಲಿ ಜಲನಾಯಿಗಳ ಹಿಂಡು ಪತ್ತೆ;

Voiceoftulunadu

ಅವಳಿ ಮಕ್ಕಳ ಅಪೂರ್ವ ಸಾಧನೆ: ದಾಖಲೆ ಪುಸ್ತಕ ಸೇರಿದ ಪುಟ್ಟ ಪ್ರತಿಭೆಗಳು ;

Voiceoftulunadu

ನೆತ್ತರಕೆರೆ: ಎಡುವೆಂಚರ್ ಪಿಯು ಕಾಲೇಜಿನಲ್ಲಿ “ಪ್ರತಿಭಾಮೃತ” ಪ್ರತಿಭೆಗಳ ಅನಾವರಣ ಕಾರ್ಯಕ್ರಮ

Voiceoftulunadu

Leave a Comment