September 5, 2026
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಎಂಡಿಎಂಎ, ಹೈಡೋಗಾಂಜಾ ಮಾರಾಟ –ಮೂವರು ಬಂಧನ;

ವರದಿ ಚಿತ್ರ : ಉಡುಪಿ ಜಿಲ್ಲಾ ಪೊಲೀಸ್

ಉಡುಪಿ, ಕಾಪು, ಮಣಿಪಾಲ ಹಾಗೂ ಕಾರ್ಕಳ ಭಾಗಗಳಲ್ಲಿ ಎಂಡಿಎಂಎ ಪೌಡರ್, ಹೈಡೋಗಾಂಜಾ ಹಾಗೂ ಎಂಡಿಎಂಎ ಟ್ಯಾಬ್ಲೆಟ್‌ ಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಿದ್ದು, ಸುಮಾರು ₹3,31,500 ಮೌಲ್ಯದ ಮಾದಕ ವಸ್ತುಗಳು ಹಾಗೂ ಕಾರು ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ಮಾರ್ಗದರ್ಶನದಲ್ಲಿ, ಮಲ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಬುಡ್ನಾರ್ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳು ಮಾದಕ ವಸ್ತುಗಳನ್ನು ಹೊಂದಿದ್ದು, ವಿವಿಧೆಡೆ ಮಾರಾಟ ನಡೆಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಯಿತು.

ಬಂಧಿತರನ್ನು ವಿಜಯ ಪೂಜಾರಿ (36), ಪಿತ್ರೋಡಿ, ಉದ್ಯಾವರ, ಪಿ.ಎ. ಮೊಹಮ್ಮದ್ ಸಮ್ಮಾಸ್ (24), ಹಾರ್ಜಿಡ್ಡು, ಕುಕ್ಕಂದೂರು ಹಾಗೂ ಆಕಾಶ್ ಶೆಟ್ಟಿ (20), ಕುಂಟಿಬೈಲು, ಮಿಯಾರು, ಕಾರ್ಕಳ ಎಂದು ಗುರುತಿಸಲಾಗಿದೆ.ಒಟ್ಟು ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ಸುಮಾರು ₹3,31,500 ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 95/2026ರಡಿ ಎನ್‌ಡಿಪಿಎಸ್ ಕಾಯ್ದೆ-1985ರ ಕಲಂ 8(c), 20(c) ಹಾಗೂ 22(a) ಅನ್ವಯ ಪ್ರಕರಣ ದಾಖಲಿಸಿ, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಕ್ರಮ ಕೈಗೊಳ್ಳಲಾಗಿದೆ.

Related posts

ಕಾಪು ಶ್ರೀ ಹಳೆ ಮಾರಿಯಮ್ಮಸಭಾಭವನದಲ್ಲಿ ನಡೆಯಲಿರುವ ಸ್ಪರ್ಧೆ.ಕಾಪುವಿನಲ್ಲಿ ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ;

Voiceoftulunadu

ಶಿರ್ವ ಗ್ರಾಪಂಗೆ ಪೂರ್ಣಕಾಲಿಕ ಅಭಿವೃದ್ಧಿ ಅಧಿಕಾರಿ ನೇಮಿಸುವಂತೆ ಮಾಜಿ ಅಧ್ಯಕ್ಷ ಕೆ. ಆರ್ ಪಾಟ್ಕರ್ ಆಗ್ರಹ : ಉಡುಪಿ ಜಿಲ್ಲೆಯ ಅತಿ ದೊಡ್ಡ ಗ್ರಾಮ ಪಂಚಾಯತ್ ಗಳಲ್ಲೊಂದಾದ ಶಿರ್ವ ಗ್ರಾಮ ಪಂಚಾಯತ್;

Voiceoftulunadu

ಕಟಪಾಡಿ ಎಸ್ ವಿ ಎಸ್ ವಿದ್ಯಾ ಸಂಸ್ಥೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ;

Voiceoftulunadu

Leave a Comment