28.5 C
ಮಂಗಳೂರು
September 4, 2026
Uncategorizedರಾಜಕೀಯರಾಜ್ಯ/ದೇಶವಾಣಿಜ್ಯ

ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್, ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿವಕುಮಾರ್ ಘೋಷಣೆ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶೇಷ ಅಂದರೆ ಕ್ಯಾಬಿನೆಟ್ ಮೀಟಿಂಗ್ ಬಳಿಕ ಮೊದಲ ಸುದ್ದಿಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿದ್ದಾರೆ. ಗಂಡು ಮಕ್ಕಳಿಗೂ ಫ್ರೀ ಬಸ್ ಪಾಸ್ ನೀಡಲಾಗುತ್ತದೆ ಎಂದಿದ್ದಾರೆ.

ಮೊದಲ ಸುದ್ದಿಗೋಷ್ಠಿಯಲ್ಲಿ ವಿದ್ಯಾರ್ಥಿಗಳಿಗೆ ಬಂಪರ್ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರೆಂಟಿ ನೀಡಿತ್ತು. ಇದೀಗ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಗಂಡು ಮಕ್ಕಳಿಗೂ ಉಚಿತ ಪಾಸ್ ನೀಡಲಾಗುತ್ತದೆ ಎಂದಿದ್ದಾರೆ. ಈ ಮೂಲಕ ರಾಜ್ಯದಲ್ಲಿರುವ ಎಲ್ಲಾ ವಿದ್ಯಾರ್ಥಿಗಳು ಉಚಿತವಾಗಿ ಸಾರಿಗೆ ಬಸ್‌ನಲ್ಲಿ ಪ್ರಯಾಣ ಮಾಡಬುಹುದು. ಈ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿದ್ದಾರೆ.ಡಿಕೆ ಶಿವಕುಮಾರ್ ಘೋಷಣೆ ಹೊರಬೀಳುತ್ತಿದ್ದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಖುಷಿಪಟ್ಟಿದ್ದಾರೆ. ಶಾಲಾ ಕಾಲೇಜುಗಳು ಶುಲ್ಕಗಳು ದುಬಾರಿಯಾಗುವು ಈಗಿನ ಪರಿಸ್ಥಿತಿಯಲ್ಲಿ ಡಿಕೆ ಶಿವಕುಮಾರ್ ಘೋಷಣೆ ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಈ ಕುರಿತು ಪೋಷಕರು ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ಸುದ್ದಿಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಅಭಿವೃದ್ಧಿ ಕುರಿತ ರೂಪುರೇಶೆ ಮುಂದಿಟ್ಟಿದ್ದಾರೆ. ಪ್ರಮುಖವಾಗಿ ರೈತರ ಸಮಸ್ಯೆಗಳ ಬಗ್ಗೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ನೀರಾವರಿ ಸಮಸ್ಯೆ ಬಗೆ ಹರಿಸಲು ತಜ್ಞರ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ಕಸದ ಸಮಸ್ಯೆ ತೀವ್ರಗೊಳ್ಳುತ್ತಿದೆ. ಹೀಗಾಗಿ ಈ ಸಂದರ್ಭದಲ್ಲಿ ಸುಮ್ಮನೆ ಮಾತುಕೊಟ್ಟರೆ ಆಗುವುದಿಲ್ಲ. ಹೀಗಾಗಿ ಸಮಸ್ಯೆ ಕುರಿತು ಪರಿಶೀಲಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ.ಉದ್ಯೋಗ ಅವಕಾಶ ಕಲ್ಪಿಸುವ ಕುರಿತು ಸರ್ಕಾರ ಗಂಭೀರವಾಗಿ ಕೆಲಸ ಮಾಡಲಿದೆ. ಶೇಕಡಾ 42ರಷ್ಟು ಜನ ನಗರದಲ್ಲಿ ವಾಸವಿದ್ದಾರೆ. ಉದ್ಯೋಗಕ್ಕಾಗಿ ಅತೀ ದೊಡ್ಡ ವಲಸೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಒಟ್ಟಾಗಿ ನಿರ್ಣಯ ಮಾಡುತ್ತೇವೆ. ಉದ್ಯೋಗ ಅವಕಾಶ ಕಲ್ವಿಸಿಕೊಡುವುದು, ಉದ್ಯೋಗ ನೇಮಕಾತಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸರ್ಕಾರ ಕೆಲಸ ಮಾಡಲಿದೆ ಎಂದಿದ್ದಾರೆ.

Related posts

ಕಟಪಾಡಿ : ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿ ಹಣ ನೀಡದೆ ಪರಾರಿಯಾದ ಕಾರು ಚಾಲಕ ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ಸ್ ಕಾರಿನಲ್ಲಿ ಬಂದ ಮೂವರು ಯುವಕರು;

Voiceoftulunadu

ಉಡುಪಿ: ಸಂಹಿತಾ ಸೌಹಾರ್ದ ಸಹಕಾರಿ ನಿಯಮಿತ ಇದರ ವಾರ್ಷಿಕ ಮಹಾಸಭೆ : ಸಭೆ ಉದ್ಘಾಟಿಸಿದ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ;

Voiceoftulunadu

ಆಗಸ್ಟ್ 10ರಂದು ಬೋಂದೆಲ್ ಸಂತ ಲಾರೆನ್ಸ್ ಚರ್ಚ್ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬದ ಆಚರಣೆ;

Voiceoftulunadu

Leave a Comment