28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕಟಪಾಡಿ ಎಸ್ ವಿ ಎಸ್ ವಿದ್ಯಾ ಸಂಸ್ಥೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ;

ವರದಿ /ಚಿತ್ರ :ಈ ಮೀಡಿಯಾ

ಕಟಪಾಡಿ: ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇದರ ಕಾಪು ವಿಧಾನಸಭಾ ವ್ಯಾಪ್ತಿಯ ಸಂಸ್ಥೆಯಾದ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಸಂಸ್ಥೆಯಲ್ಲಿ ಶೈಕ್ಷಣಿಕ ವರ್ಷದ ಯಕ್ಷ ಶಿಕ್ಷಣ ತರಗತಿಗಳ ಉದ್ಘಾಟನೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಉದ್ಘಾಟಿಸಿದರು.

ಈ ಸಂದರ್ಭ ಅವರು ಮಾತನಾಡಿ, ಯಕ್ಷ ಶಿಕ್ಷಣ ಟ್ರಸ್ಟ್ ಇದು ಯಕ್ಷಗಾನ ಕಲೆಯ ಉಳಿವು, ಬೆಳವಣಿಗೆ ಮತ್ತು ಮುಂದಿನ ಪೀಳಿಗೆಗೆ ಈ ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ಅತ್ಯಂತ ಶ್ಲಾಘನೀಯ ಕೆಲಸ ಮಾಡುತ್ತಿರುವ ಒಂದು ಪ್ರಮುಖಸಂಸ್ಥೆ. ಉಡುಪಿ ಜಿಲ್ಲೆಯ ಶಾಲೆಗಳಲ್ಲಿ ಯಕ್ಷಗಾನವನ್ನು ಒಂದು ಪಠ್ಯಪೂರಕ ಚಟುವಟಿಕೆಯಾಗಿ ಪರಿಚಯಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಹೆಗ್ಗಳಿಕೆ ಈ ಟ್ರಸ್ಟ್ ಸಲ್ಲುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಎಸ್ ವಿ ಎಸ್ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ ಸತ್ಯೇಂದ್ರ ಪೈ ಮಾತನಾಡಿ, ಯಕ್ಷಗಾನ ಕಲಾರಂಗ ಸಂಸ್ಥೆಯ ಮೂಲಕ ಹಮ್ಮಿಕೊಂಡ ಕಾರ್ಯಕ್ರಮಗಳನ್ನು ಶ್ಲಾಘಿಸಿದರು. ಮಕ್ಕಳಲ್ಲಿ ನಾಯಕತ್ವ TDEO ಮೈಗೂಡಿಸಿಕೊಳ್ಳಲು ಯಕ್ಷಗಾನಸಹಾಯಕ ಎಂದರು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಬಿ ಚಂದ್ರಕಾಂತ್ ಪೈ, ವೆಂಕಟರಮಣ ಭಟ್‌, ನಿತ್ಯಾನಂದ ಶೆಣೈ, ಆಡಳಿತಾಧಿಕಾರಿ ಸುಧಾಕರ್ ಬ್ರಹ್ಮಾವರ, ಶೈಕ್ಷಣಿಕ ಸಲಹೆಗಾರ ದೇವೇಂದ್ರ ನಾಯಕ್ ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕಿ ಸುಜಾ ಡಿಸೋಜ ಸ್ವಾಗತಿಸಿದರು. ಸರ್ವೋತ್ತಮ ಆಚಾರ್ಯ ಮತ್ತು ಶಾರ್ಲೆಟ್ ಕಾರ್ಯಕ್ರಮ ನಿರೂಪಿಸಿದರು. ಚೈತ್ರಾ ಹೆಗ್ಡೆ ವಂದಿಸಿದರು.

Related posts

ಕಾಪು ಸಹಕಾರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ : ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕ್ಷಯಧಾರ ಸೊಸೈಟಿಯ ಕಾರ್ಯಾಧ್ಯಕ್ಷ ಲವ ಕರ್ಕೇರ;

Voiceoftulunadu

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್; ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ :

Voiceoftulunadu

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಅಂತರರಾಷ್ಟ್ರೀಯ ಅಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಆಯ್ಕೆ: ಶತಮಾನೋತ್ಸವದ ಹೊಸ್ತಿಲಲ್ಲಿ ತುಳುವ ನಾಗರಿಕತೆಯ ವೈಭವವನ್ನು ಮರುಸ್ಥಾಪಿಸುವ ಮಹಾಸಂಕಲ್ಪ;

Voiceoftulunadu

Leave a Comment