28.5 C
ಮಂಗಳೂರು
September 4, 2026
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕಟಪಾಡಿ : ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿ ಹಣ ನೀಡದೆ ಪರಾರಿಯಾದ ಕಾರು ಚಾಲಕ ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ಸ್ ಕಾರಿನಲ್ಲಿ ಬಂದ ಮೂವರು ಯುವಕರು;

ವರದಿ /ಚಿತ್ರ:ಇ ಮೀಡಿಯಾ

ಕಾಪು : ಕಾರು ಚಾಲಕ ಪುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ನೀಡದೆ ಪರಾರಿಯಾದ ಘಟನೆ ಕಾಪು ತಾಲೂಕಿನ ಶಂಕರಪುರದ ಸುಭಾಷ್ ನಗರದಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ನಲ್ಲಿ ಘಟಿಸಿದೆ.

ಮೂವರು ಯುವಕರು ಸುಭಾಷ್ ನಗರದಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ಗೆ ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ಸ್ ಕಾರಿನಲ್ಲಿ ಆಗಮಿಸಿ, ಫುಲ್ ಟ್ಯಾಂಕ್ ಡೀಸೆಲ್ ತುಂಬಿಸುವಂತೆ ಸಿಬ್ಬಂದಿಗೆ ತಿಳಿಸಿದ್ದರು.ಸಿಬ್ಬಂದಿ ಒಟ್ಟು 4,711 ರೂ. ಮೌಲ್ಯದ ಡೀಸೆಲ್ ತುಂಬಿಸಿದ್ದಾರೆ. ಬಳಿಕ ಬಿಲ್ ಮಾಡುವಂತೆ ಹೇಳಿ, ಯಾವುದೇ ಹಣ ಪಾವತಿಸದೆ ಕಾರನ್ನು ಅತಿ ವೇಗದಲ್ಲಿ ಚಲಾಯಿಸಿಕೊಂಡು ಪರಾರಿಯಾಗಿದ್ದಾರೆ.ಕಾರಿನೊಳಗಿದ್ದ ಮೂವರು ಯುವಕರು ಮಾತನಾಡುತ್ತಿದ್ದರು ಎಂದು ಸಿಬ್ಬಂದಿ ಮಾಹಿತಿ ನೀಡಿದ್ದರು.

ತುಳು ಭಾಷೆಯನ್ನು ಸರಾಗವಾಗಿಯುವಕರು ಮದ್ಯಪಾನ ಮಾಡಿದ್ದಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, టింటో ಗ್ಲಾಸ್ಅಳವಡಿಸಿದ್ದ ಕಾರಿನೊಳಗೆ ಮದ್ಯದ ಬಾಟಲಿ ಇದ್ದುದಾಗಿ ಸಿಬ್ಬಂದಿ ತಿಳಿಸಿದ್ದಾರೆ.ಸಿಸಿಟಿವಿ ದೃಶ್ಯಗಳಲ್ಲಿ ಕಾರಿನ ನೋಂದಣಿ ಸಂಖ್ಯೆ ಸ್ಪಷ್ಟವಾಗಿ ಕಾಣಿಸದ ಕಾರಣ ವಾಹನದ ಗುರುತು ಪತ್ತೆ ಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಈ ಕುರಿತು ಪೆಟ್ರೋಲ್ ಬಂಕ್ ಸಿಬ್ಬಂದಿ ಶಿರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Related posts

ಉಡುಪಿ ಪ್ರಕೃತಿ ಲಯನ್ಸ್ ಕ್ಲಬ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ.ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಶೀರೂರು ಆಯ್ಕೆ;

Voiceoftulunadu

ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ ವತಿಯಿಂದ ಬೃಹತ್ ರಕ್ತದಾನ ಶಿಬಿರ ;

Voiceoftulunadu

ಅಪ್ರಾಪ್ತ ಬಾಲಕಿಯ ಕೊಲೆಗೆ ಯತ್ನ, ಆರೋಪಿ ಠಾಣೆಗೆ ಶರಣು, ಬೆಚ್ಚಿ ಬೀಳಿಸಿದ ಕೃತ್ಯ;

Voiceoftulunadu

Leave a Comment