28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು: ಯುವವಾಹಿನಿ ಟ್ರೋಫಿ 2026 ಚೆಸ್ ಪಂದ್ಯಾವಳಿಗೆ ಚಾಲನೆ.ಕಾಪು ಹಳೆ ಮಾರಿಯಮ್ಮಗುಡಿಯ ಸಭಾಭವನದಲ್ಲಿ ನಡೆದ ಪಂದ್ಯಾವಳಿ ;

ವರದಿ /ಚಿತ್ರ: ಈ ಮೀಡಿಯಾ

ಕಾಪು, ಆ. 10: ಯುವಕರಲ್ಲಿ ಬೌದ್ಧಿಕ ಸಾಮರ್ಥ್ಯ, ಏಕಾಗ್ರತೆ ಹಾಗೂ ಕ್ರೀಡಾ ಮನೋಭಾವ ಬೆಳೆಸುವಲ್ಲಿ ಚೆಸ್ ಸಹಕಾರಿಯಾಗಲಿದೆ ಎಂದು ಮಂಗಳೂರು ಸಿಎಆರ್, ಡೆಪ್ಯೂಟಿ ಕಮಿಶನರ್ ಆಫ್ ಪೊಲೀಸ ರಾದ, ಉಮೇಶ್ ಪಿ. ಹೇಳಿದರು.ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಯುವವಾಹಿನಿ ಕಾಪು ಘಟಕದ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಚೆಸ್ ಸಂಸ್ಥೆ, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಸಹಯೋಗದಲ್ಲಿ ಭಾನುವಾರ ಆಯೋಜಿಸಿರುವ ಓಪನ್ ಹಾಗೂ ವಯೋಮಿತಿ ಚೆಸ್ ‘ಯುವವಾಹಿನಿ ಪಂದ್ಯಾವಳಿಯಲ್ಲಿ 23 e-2026’ ಕಾಯಿ ಮುನ್ನಡೆಸಿ, ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದಕಾಪು ಶ್ರೀ ಹಳೇ ಮಾರಿಯಮ್ಮ ಗುಡಿಯ ಆಡಳಿತ ಮೊಕ್ತಸರ ಪ್ರಸಾದ್ ಶೆಣೈ ಮಾತನಾಡಿ, ಗ್ರಾಮೀಣ ಪ್ರದೇಶದ ಚೆಸ್ ಪ್ರತಿಭೆಗಳನ್ನು ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಮುನ್ನಡೆಸಲು ಈ ಪಂದ್ಯಾಟ ಸಹಕಾರಿ ಎಂದರು.

ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಡು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮೊಬೈಲ್, ಟಿವಿ ಮತ್ತು ಸಾಮಾಜಿಕ ಜಾಲತಾಣಗಳಿಗೆ ಚೆಸ್ ಕ್ರೀಡೆ ಪರ್ಯಾಯವಾಗಲಿದೆ. ಈ ಮೂಲಕ ಕೇಂದ್ರ ಸಮಿತಿ ಅಧೀನದ 35 ಘಟಕಗಳಲ್ಲಿ ಕಾಪು ಯುವವಾಹಿನಿ ಘಟಕವು ಮಾದರಿ ಸಂಸ್ಥೆಯಾಗಿ ಮೂಡಿ ಬಂದಿದೆ ಎಂದರು.ಕಾಪು ಬಿಲ್ಲವ ಸಹಾಯಕ ಸಂಘದ ಅಧ್ಯಕ್ಷ ವಿಕ್ರಂ ಕಾಪು, ಕಾಪು ಸಿಎ ಬ್ಯಾಂಕ್ ಅಧ್ಯಕ್ಷ ಕಾಪು ದಿವಾಕರಶೆಟ್ಟಿ, ಉದ್ಯಮಿ ಪ್ರಭಾಕರ ಪೂಜಾರಿ ಕೈಪುಂಜಾಲು, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷ ಉಮಾನಾಥ್ ಕಾಪು, ಯುವವಾಹಿನಿ ಕಾಪು ಘಟಕದ ಅಧ್ಯಕ್ಷೆ ಅನಿತಾ ಸುರೇಂದ್ರ ಉಪಸ್ಥಿತರಿದ್ದರು.

ಯುವವಾಹಿನಿ ಕಾಪು ಘಟಕದ ನಿರ್ದೇಶಕ ರಾಕೇಶ್ ಕುಂಜೂರು ಸ್ವಾಗತಿಸಿ ಪ್ರಸ್ತಾವನೆಗೈದರು. ಪ್ರಧಾ ನ ಕಾರ್ಯದರ್ಶಿ ಸುನೀಲ್ ಪೂಜಾರಿ ವಂದಿಸಿದರು. ಉಪನ್ಯಾಸಕ ರಾಕೇಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.ಸುಮಾರು 250 ಕ್ಕೂ ಅಧಿಕ ಸ್ಪರ್ಧಾಳುಗಳು ವಿವಿಧ ಜಿಲ್ಲೆಯಿಂದ ಮತ್ತು ವಿವಿಧ ರಾಜ್ಯಗಳಿಂದ ಭಾಗವಹಿಸಿದ್ದರು ಹಾಗೂ ఎలా ಸ್ಪರ್ಧಾಳುಗಳು ಮತ್ತು ಪೋಷಕರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

Related posts

ಕುಂತಳ ನಗರ ಬಂಟರ ಸಂಘದ ಆಟಿಡೊಂಜಿ : ದಿನ.ಕುಂತಳನಗರ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಸನ್ ಹಾಲ್‌ನಲ್ಲಿ ನಡೆಯಲಿರುವ ಕಾರ್ಯಕ್ರಮ ;

Voiceoftulunadu

ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್ ಇವರಿಂದ ಬಂಟಕಲ್ಲು ಶಾಲೆಗೆ ತರಕಾರಿ, ಜೀನಸು ಸಾಮಾಗ್ರಿ ಕೊಡುಗೆ : ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಲಯನ್ಸ್ ಅಧ್ಯಕ್ಷೆ ಸಿಂಥಿಯಾ ಡಿ’ಸೋಜ ;

Voiceoftulunadu

ಪುತ್ತೂರು ವಲಯ ಸಂಚಾಲಕರಾಗಿ ಮನೋಹರ ರೈ, ಮನವಳಿಕೆ ಗುತ್ತು, ನೇಮಕ ;

Voiceoftulunadu

Leave a Comment