September 5, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಶ್ರೀ ಹಳೆ ಮಾರಿಯಮ್ಮಸಭಾಭವನದಲ್ಲಿ ನಡೆಯಲಿರುವ ಸ್ಪರ್ಧೆ.ಕಾಪುವಿನಲ್ಲಿ ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ;

ವರದಿ/ ಚಿತ್ರ: ಈ ಮೀಡಿಯಾ

ಕಾಪು: ಯುವವಾಹಿನಿ (8.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು ಸ್ಕೂಲ್ ಆಫ್ ಚೆಸ್ ಕಾಪು ಮತ್ತು ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಆಗಸ್ಟ್ 9 ರ ಭಾನುವಾರ ಕಾಪು ಶ್ರೀ ಹಳೆ ಮಾರಿಯಮ್ಮ ಸಭಾಭವನದಲ್ಲಿ ಯುವವಾಹಿನಿ ಟ್ರೋಫಿ-2026′ ಮುಕ್ತ ಹಾಗೂ ವಯೋಮಿತಿ ವಿಭಾಗದ ಚೆಸ್ ಪಂದ್ಯಾವಳಿ ಕ್ಯಾಪಿಡ್ ನಡೆಯಲಿದೆ.

ಪಂದ್ಯಾವಳಿಯಲ್ಲಿ ಒಟ್ಟು 30,303ರೂ. ನಗದು ಬಹುಮಾನ ಹಾಗೂ 128 ಟ್ರೋಫಿಗಳನ್ನು ವಿಜೇತರಿಗೆ ವಿತರಿಸಲಾಗುವುದು.ಓಪನ್ ಹಾಗೂ ವಿವಿಧ ವಯೋಮಿತಿ ವಿಭಾಗಗಳಲ್ಲಿ ತಲಾ 20 ಬಹುಮಾನಗಳನ್ನು ಘೋಷಿಸಲಾಗಿದೆ.ಸ್ಪರ್ಧಾಳುಗಳು ಹಾಗೂ ಅವರ ಪೋಷಕರಿಗೆ ಉಚಿತ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.

ಚದುರಂಗ ಕ್ರೀಡೆಯನ್ನು ಉತ್ತೇಜಿಸುವ ಹಾಗೂ ಪ್ರತಿಭಾವಂತ ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಈ ಪಂದ್ಯಾವಳಿಯನ್ನುಆಯೋಜಿಸಲಾಗಿದೆ.ಜಿಲ್ಲೆಯ ವಿವಿಧ ಭಾಗಗಳಿಂದ ಹಾಗೂ ರಾಜ್ಯದ ವಿವಿಧೆಡೆಗಳಿಂದ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆಯಿದೆ.

https://www.chess-fee.com ಮೂಲಕ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿ ಕೊಳ್ಳಬಹುದಾಗಿದೆ.ಮಕ್ಕಳಿಗೆ ಸ್ಪರ್ಧಾತ್ಮಕ ಅನುಭವ ಹಾಗೂ ಪ್ರತಿಭೆ ಪ್ರದರ್ಶಿಸಲು ಇದು ಉತ್ತಮ ಅವಕಾಶವಾಗಿದ್ದು, ಶೀಘ್ರ ನೋಂದಣಿ ಮಾಡಿಕೊಳ್ಳುವಂತೆ ಯುವವಾಹಿನಿ ಕಾಪು ಘಟಕದ ಪ್ರಕಟಣೆ ತಿಳಿಸಿದೆ.

Related posts

ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಅವರಿಗೆ ಡಾಕ್ಟರೇಟ್ ಪ್ರಧಾನ;

Voiceoftulunadu

ಸ್ವಿಟ್ಸರ್ಲೆಂಡ್ ನ ಪ್ರತಿಷ್ಠಿತ ಡನ್ಸರ್ ಬಿಸಿನೆಸ್ ಸ್ಕೂಲ್ ನಿಂದ ಹೇಮಾವತಿ ವೀ.ಹೆಗ್ಗಡೆಗೆ ಗೌರವ ಡಾಕ್ಟರೇಟ್ ಪ್ರದಾನ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಜ್ಯಮಟ್ಟದ ಪುನಶ್ವೇತನಾ ಕಾರ್ಯಾಗಾರದಲ್ಲಿ ಪದವಿ ಪ್ರದಾನ;

Voiceoftulunadu

ಧರ್ಮಸ್ಥಳ ಕ್ಷೇತ್ರ ಮತ್ತು ಹೆಗ್ಗಡೆಯವರ ವಿರುದ್ಧ ನಡೆದ ದೊಡ್ಡ ಮಟ್ಟದ ಪಿತೂರಿ ; ಚಿನ್ನಯ್ಯನಿಂದ ರಿಟ್ಕರಾವಳಿ ಹಾಗೂ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ ಪ್ರಕಾಶ್ ರಾಜ್ ಹೆಸರು:

voiceoftulunadu

Leave a Comment