28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಿನಾರ ಗ್ಲೋಬಲ್ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನೆ : ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ ಸಂಚಾಲಿತ ಶಾಲೆ;

ವರದಿ /ಚಿತ್ರ :ಈ ಮೀಡಿಯಾ

ತೆಂಕ ಎರ್ಮಾಳು : ತೆಂಕ ಎರ್ಮಾಳು ಕಿನಾರ ಗ್ಲೋಬಲ್ ಶಾಲೆಯಲ್ಲಿ 2025-26 ನೇ ಸಾಲಿನ S S L C ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ಬುಧವಾರ ಶಾಲಾ ಸಭಾಭವನದಲ್ಲಿ ನೆರವೇರಿತು.

ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ (ರಿ) ಮುಂಬೈ ಇದರ ಅಧ್ಯಕ್ಷ ಸುರೇಶ್ ಎಸ್ ಕುಂದರ್ ಮತ್ತು గిరిలలో ఎనో శుందరో కుటుంబ ಇವರ ವತಿಯಿಂದ ಎಸ್ ಎಸ್ ಎಲ್ ವಿದ್ಯಾರ್ಥಿಗಳಿಗೆ ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಹಾಗೂ ಶ್ರಮವಹಿಸಿದ ಶಿಕ್ಷಕರಿಗೆ ರೂ 3 ಲಕ್ಷ ಪ್ರೋತ್ಸಾಹ ಧನ ನೀಡಿ ಅಭಿನಂದಿಸಲಾಯಿತು.

ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ ಅಧ್ಯಕ್ಷ ಕಿಶೋರ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭ ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ ಮುಂಬೈ ಇದರ ಅಧ್ಯಕ್ಷ ಸುರೇಶ್ ಎಸ್ ಕುಂದರ್, ಎರ್ಮಾಳು ತೆಂಕ ಮೊಗವೀರ ಸಭಾದ ಅಧ್ಯಕ್ಷ ಲಿಂಗಪ್ಪ ಪುತ್ರನ್, ಕಿನಾರ ಶಾಲಾ ಕಟ್ಟಡ ನಿಧಿ ಸಂಗ್ರಹಣಾ ಸಮಿತಿಯ ಅಧ್ಯಕ್ಷ ದಾಮೋದರ್ ಸು ವರ್ಣ, ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಪ್ರಭಾಕರ್ ಪುತ್ರನ್, ಧರ್ಮರಾಜ್ ಎರ್ಮಾಳು, ಆಡಳಿತ ಮಂಡಳಿಯ ಸಮಿತಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಶ್ರೀಮತಿ ಪ್ರೀತಿ ಸುವರ್ಣ ಪ್ರಸ್ತಾವಿಕ ವಾಗಿ ಮಾತನಾಡಿದರು. ಶ್ರೀಮತಿ ಅಶ್ವಿನಿ ಆರ್ ಸ್ವಾಗತಿಸಿದರು. ಶ್ರೀಮತಿ ಕವಿತಾ ಪುತ್ರನ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ದೀಕ್ಷಾ ರೋಷನ್ ವಂದಿಸಿದರು.

Related posts

ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ ವಾರ್ಷಿಕ (ಒಳಾಂಗಣ ಕ್ರೀಡಾ) ಇಂಡೋರ್ ಗೇಮ್ ದಿನಾಚರಣೆ;

Voiceoftulunadu

ರೋಟರಿ ಕ್ಲಬ್ ಕಲ್ಯಾಣಪುರ ವತಿಯಿಂದ ಪರೀಕ್ಷಾ ಪೂರ್ವ ತಯಾರಿಯ ಉಪನ್ಯಾಸ ಕಾರ್ಯಕ್ರಮ: ವಿನಯ ಕುಮಾ‌ರ್ ಕಬ್ಬಾಡಿ ಅವರಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಎಂಬ ವಿಷಯದ ಕುರಿತು ಮಾಹಿತಿ ;

Voiceoftulunadu

ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ ವತಿಯಿಂದ ಬೃಹತ್ ರಕ್ತದಾನ ಶಿಬಿರ ;

Voiceoftulunadu

Leave a Comment