ವರದಿ /ಚಿತ್ರ : ಈ ಮೀಡಿಯಾ
ಕಟಪಾಡಿ, ಅ. 5: ಉಡುಪಿ ಗ್ರಾಮೀಣ ಬಂಟರ ಸಂಘದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಕುಂತಳನಗರ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಸನ್ ಹಾಲ್‌ನಲ್ಲಿ ಅಧ್ಯಕ್ಷರಾದ ಡಾ| ಎಚ್.ಬಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಆ. 9ರಂದು ಬೆಳಗ್ಗೆ 10.30 ಕ್ಕೆ ನಡೆಯಲಿದೆ.
ಹಿರಿಯ ನ್ಯಾಯವಾದಿ ಎಂ. ಶಾಂತಾರಾಮ ಶೆಟ್ಟಿ, ಕಟೀಲು ತುಳು ವರ್ಲ್ಡ್ ಫೌಂಡೇಶನ್ ನಿರ್ದೇಶಕ ಡಾ| ರಾಜೇಶ್ ಕೃಷ್ಣ ಆಳ್ವ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವರು ಎಂದು ಕಾರ್ಯದರ್ಶಿ ವಿಜಿತ್ ಶೆಟ್ಟಿ, ಖಜಾಂಚಿ ರಂಜನಿ ಹೆಗ್ಡೆ ಅವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
