November 4, 2026
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯಕ್ಕಾಗಿ ಕಾಪು ಹೊಸ ಮಾರಿಗುಡಿಯಲ್ಲಿ ಸಾಮೂಹಿಕ ಪ್ರಾರ್ಥನೆಶ್ರೀ ಹೊಸ ಮಾರಿಗುಡಿಯ ತಂತ್ರಿ ಕುಮಾರಗುರು ತಂತ್ರಿ ನೇತೃತ್ವದಲ್ಲಿ ಪ್ರಾರ್ಥನೆ ;

ವರದಿ/ ಚಿತ್ರ: ಈ ಮೀಡಿಯಾ

ಕಾಪು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ನವೋದಯ ಸ್ವಸ ಹಾಯ ಗುಂಪುಗಳ ಸಂಸ್ಥಾಪಕ, ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾ‌ರ್ ಅವರ ಆರೋಗ್ಯಕ್ಕಾಗಿ ಮತ್ತು ದೀರ್ಘಾಯುಷ್ಯ ಕ್ಕಾಗಿ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಗುರುವಾರ ಸಂಜೆ ಸಂಜೆ ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಶ್ರೀ ಹೊಸ ಮಾರಿಗುಡಿಯ ಪ್ರಧಾನ ತಂತ್ರಿ ವಿದ್ವಾನ್ ಕೊರಂಗ್ರಪಾಡಿ ಕುಮಾರಗುರು ತಂತ್ರಿ ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇದ ಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರ ಉಪಸ್ಥಿತಿಯಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ಹಾಗೂ ಸಾಮೂಹಿಕ ಪ್ರಾರ್ಥನೆ ನೆರವೇರಿಸಲಾಯಿತು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಅಧ್ಯಕ್ಷ ವಾಸುದೇವ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾಪು ಸಿಎ ಬ್ಯಾಂಕ್ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಉದಯ ಸುಂದರ ಶೆಟ್ಟಿ, ಯೋಗೀಶ್ ಶೆಟ್ಟಿ ಬಾಲಾಜಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ನವೋದಯ ಸ್ವಸಹಾಯ ಗುಂಪುಗಳ ಮೇಲ್ವಿಚಾರಕ ಹರಿನಾಥ್, ಸಹಾಯಕ ಮೇಲ್ವಿಚಾರಕ ಕೃಷ್ಣ, ಅನಿತಾ ಉದಯ್ ಕುಮಾರ್ ಸಹಿತ ಸ್ವಸಹಾಯ ಗುಂಪುಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ : ಉಡುಪಿ ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಯಶ್ವಾಲ್ ಸುವರ್ಣರಿಂದ ಭಾಷಣದ ಹಿನ್ನೆಲೆ;

Voiceoftulunadu

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ : ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ, ಇನ್ನಷ್ಟು ತಲೆದಂಡ ಸಾಧ್ಯತೆ;

Voiceoftulunadu

ಮುಂಡ್ಕೂರು ಅಮೂಲ್ಯ ರಾವ್ ರವರಿಗೆ ಬಿ.ಇ.ಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ : ಮೂಡುಬಿದಿರೆಯ ಮೈಟ್ ಕಾಲೇಜಿನ ವಿದ್ಯಾರ್ಥಿ ಅಮೂಲ್ಯಾ;

Voiceoftulunadu

Leave a Comment