28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಣ್ಣೂರು ಮಾಲ್ಯಗುತ್ತು ಬಿ.ಬಿ. ಐತ್ತಪ್ಪ ರೈ ನೇಮಕ;

ಮಡಿಕೇರಿ : 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಣ್ಣೂರು ಮಾಲ್ಯಗುತ್ತು ಶ್ರೀ ಬಿ.ಬಿ. ಐತ್ತಪ್ಪ ರೈ ಅವರನ್ನು ನೇಮಕ ಮಾಡಲಾಗಿದೆ.

ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ತುಳುವರ ಪ್ರಮುಖರ ಸಭೆಯಲ್ಲಿ ತುಳುವ ಮಹಾಸಭೆ ಇಂಟರ್ನ್ಯಾಷನಲ್ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷರಾದ ಶ್ರೀ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನೇಮಕಾತಿಯನ್ನು ಘೋಷಿಸಲಾಯಿತು.

ಶ್ರೀ ಬಿ.ಬಿ. ಐತ್ತಪ್ಪ ರೈ ಅವರು ಕೊಡಗು ಜಿಲ್ಲೆಯಲ್ಲಿ ತುಳು ಭಾಷೆ, ಸಂಸ್ಕೃತಿ ಹಾಗೂ ತುಳುವರ ಸಂಘಟನೆಯ ಬೆಳವಣಿಗೆಗೆ ಅಮೂಲ್ಯ ಕೊಡುಗೆ ನೀಡಿರುವ ಸಮಾಜಮುಖಿ ವ್ಯಕ್ತಿತ್ವವಾಗಿದ್ದು, ಜಿಲ್ಲೆಯಾದ್ಯಂತ ತುಳುವರನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ವೃತ್ತಿಯಲ್ಲಿ ಪಿ.ಡಬ್ಲ್ಯು.ಡಿ. ಗುತ್ತಿಗೆದಾರ ಹಾಗೂ ಉದ್ಯಮಿಯಾಗಿರುವ ಅವರು, ಮಾಜಿ ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷರು, ಹಾಲಿ ಬಂಟರ ಸಂಘದ ಗೌರವಾಧ್ಯಕ್ಷರು, ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾಧ್ಯಕ್ಷರು, ಕೆ.ಡಿ.ಸಿ.ಎ. ಬ್ಯಾಂಕ್‌ನ ನಿರ್ದೇಶಕರು, ಕೊಡಗು ಜಿಲ್ಲಾ ಜನಪದ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಮಡಿಕೇರಿ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಟ್ರಸ್ಟಿ ಹಾಗೂ ಖಜಾಂಜಿ, ವಿಜಯ ವಿನಾಯಕ ದೇವಾಲಯದ ಟ್ರಸ್ಟಿ ಸೇರಿದಂತೆ ಅನೇಕ ಧಾರ್ಮಿಕ, ಸಾಮಾಜಿಕ ಹಾಗೂ ಸಹಕಾರಿ ಸಂಸ್ಥೆಗಳಲ್ಲಿ ಜವಾಬ್ದಾರಿಯುತ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದಾರೆ.

ಅವರ ಸಂಘಟನಾ ಸಾಮರ್ಥ್ಯ, ಸಮಾಜಸೇವೆ ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯ ಉಳಿವು-ಬೆಳವಣಿಗೆಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಅಂತರರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷರಾದ ಶ್ರೀ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ಅವರು ಶ್ರೀ ಬಿ.ಬಿ. ಐತ್ತಪ್ಪ ರೈ ಅವರನ್ನು ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಕಗೊಳಿಸಿದ್ದಾರೆ.

ಈ ನೇಮಕವನ್ನು ತುಳುವರ್ಲ್ಡ್ ಫೌಂಡೇಶನ್‌ನ ಗೌರವಾಧ್ಯಕ್ಷರಾದ ಶ್ರೀ ಶ್ರೀಹರಿನಾರಾಯಣ ದಾಸ್ ಅಸ್ರಣ್ಣ ಕಟೀಲ್, ಅಧ್ಯಕ್ಷೆ ಶ್ರೀಮತಿ ಭಾನುಮತಿ ಶೆಟ್ಟಿ ಕಕ್ವಗುತ್ತು, ಕಾರ್ಯದರ್ಶಿ ಶ್ರೀ ವಸಂತ ರೈ ಕುತ್ತೇತ್ತೂರು, ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವ ಹಾಗೂ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷ ಶ್ರೀ ದೇವೇಂದ್ರ ಹೆಗ್ಗಡೆ ಕೊಕ್ರಾಡಿ, ಕೇಂದ್ರೀಯ ಸಮಿತಿ ಅಧ್ಯಕ್ಷ ಡಾ. ಅವಿನ್ ಬಿ. ಆರ್. ಆಳ್ವ, ಕೇಂದ್ರೀಯ ಸಮಿತಿ ಕಾರ್ಯದರ್ಶಿ ಶ್ರೀ ಅರವಿಂದ್ ಬೆಲ್ಚಾಡ ಮತ್ತು ಕೇಂದ್ರೀಯ ಸಮಿತಿ ಸಂಚಾಲಕ ಶ್ರೀ ವಿಶ್ವನಾಥ ಆಚಾರ್ಯ ಅವರು ಹರ್ಷದಿಂದ ಸ್ವಾಗತಿಸಿ, ನೂತನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ಬಿ.ಬಿ. ಐತ್ತಪ್ಪ ರೈ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭ ಹಾರೈಕೆಗಳನ್ನು ಸಲ್ಲಿಸಿದ್ದಾರೆ.

Related posts

ಹಿಂದೂಗಳ ಧ್ವನಿ ಅಡಗಿಸುವ ಪ್ರಯತ್ನ ಖಂಡನೀಯ : ರಮಿತಾ ಸೂರ್ಯವಂಶಿ : ಪಂಜಿನ ಮೆರವಣಿಗೆಗೆ ಪುನೀತ್ ಅತ್ತಾವರ, ನರಸಿಂಹ ಮಾಣಿಯವರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧ ;

Voiceoftulunadu

ಗರ್ಭಿಣಿಯನ್ನು ಕೈಬಿಟ್ಟ ಖಾಸಗಿ ಆಸ್ಪತ್ರೆ ಲೇಡಿಗೋಷನ್‌ನಲ್ಲಿ ಪುನರ್‌ಜೀವ!

Voiceoftulunadu

ಕಾಪು ಶ್ರೀ ಹೊಸ ಮಾರಿಗುಡಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ;ಪ್ರಾಧಿಕಾರದ ಅಧ್ಯಕ್ಷರಿಗೆ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿಯಿಂದ  ಗೌರವ:

voiceoftulunadu

Leave a Comment