28.5 C
ಮಂಗಳೂರು
September 4, 2026
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ನಂದಿಕೂರು : 73 ಕೆ.ಜಿ ಗೂ ಅಧಿಕ ತೂಕದ ಗಾಂಜಾ ನಾಶಉಡುಪಿ ಜಿಲ್ಲಾ ಎಸ್ಪಿ ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿಯ ಅಧ್ಯಕ್ಷ ಹರಿರಾಂ ಶಂಕರ್ ನೇತೃತ್ವ;

ವರದಿ /ಚಿತ್ರ: ಇ ಮೀಡಿಯಾ

ಪಡುಬಿದ್ರಿ : ಮಾದಕ ವಸ್ತು ವಿರೋಧಿ ದಿನಾಚರಣೆಯ ನ್ಯಾಯಾಲಯದ ಅಂಗವಾಗಿ ಆದೇಶಾನುಸಾರ ಉಡುಪಿ ಜಿಲ್ಲೆಯ ವಿವಿಧ ಪೋಲಿಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ರೂ.36,29,550 ಮೌಲ್ಯದ ಸುಮಾರು 73 ಕೆಜಿ 92 ಮಿಲಿ ಗ್ರಾಂ ತೂಕದ ಗಾಂಜಾವನ್ನು ಪಡುಬಿದ್ರಿ ಸಮೀಪದ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಆಯುಷ್ ಎನ್ವಿರೋಟೆಕ್ ಪ್ರೈ.ಲಿ. ಇಲ್ಲಿ ಶುಕ್ರವಾರ ನಾಶಪಡಿಸಲಾಯಿತು.

ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿಯ ಅಧ್ಯಕ್ಷರಾದ ಹರಿರಾಂ ಶಂಕರ್ ಮಾತನಾಡಿ, ಅವಧಿಯಲ್ಲಿ ಒಂದು ವರ್ಷದ ಅವಧಿಯಲ್ಲಿ ವಶಪಡಿಸಿದ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ. ಈಗಾಗಲೇ ಮಾದಕ ವಸ್ತುಗಳ ಮೇಲೆ ನಿಯಂತ್ರಣ ಮಾಡಲು ಕ್ಯೂ ಆರ್ ಕೋಡ್ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಮೂಲಕ ಸುಮಾರು ಮಾಹಿತಿಗಳು ಲಭ್ಯವಾಗಿದೆ. ಸಾರ್ವಜನಿಕರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು. ಅದರ ಆಧಾರದ ಮೇಲೆ ಕ್ರಮ ವಹಿಸಲಾಗುವುದು.

ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲೆಯಲ್ಲಿ ಸುಮಾರು 160 ಆ್ಯಂಟಿ ಡ್ರಗ್ ಅವಾರ್ನೆಸ್ ಕಮಿಟಿಯನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಮಾಡಲಾಗಿದೆ. ಇದರ ಮೂಲಕ ಜಿಲ್ಲೆಯಲ್ಲಿ ಮಾದಕ ವಸ್ತುಪ್ರಕರಣಗಳು ಕಡಿಮೆಯಾಗುತ್ತಿದೆ ಎಂದರು.ಈ

ಸಂದರ್ಭ ಅಡಿಶನಲ್ ಎಸ್ಪಿ ಸುಧಾಕರ್ ನಾಯ್ಕ್, ಕಾರ್ಕಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್, ಉಡುಪಿ ಉಪವಿಭಾಗದ ಡಿವೈಎಸ್ಪಿ ಬೆಳ್ಳಿಯಪ್ಪ, ಕಾಪು ವೃತ್ತ ನಿರೀಕ್ಷಕ ಅಜ್ಜತ್ ಆಲಿ, ಕಾಪು ಠಾಣಾಧಿಕಾರಿ ತೇಜಸ್ವಿ, ಪಡುಬಿದ್ರಿ ಠಾಣಾಧಿಕಾರಿ ಶಕ್ತಿವೇಲು, ಪಿಎಸ್‌ಐ ಗೋಪಾಲ್ ನಾಯ್, ಎಎಸ್ఐ ಪ್ರಕಾಶ್, ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ ವತಿಯಿಂದ ಬೃಹತ್ ರಕ್ತದಾನ ಶಿಬಿರ ;

Voiceoftulunadu

ರಾಜ್ಯ ಸಭಾ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ: ಉಪರಾಷ್ಟ್ರಪತಿ ಕಚೇರಿಯಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ ಖರ್ಗೆ;

Voiceoftulunadu

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್‌: ಸೈಬರ್ ಪೊಲೀಸರಿಗೆ ದೂರು ‘ಜಲಗಾರ ಯೂನಿವರ್ಸಿಟಿ‘ ಹೆಸರಿನ ನಕಲಿ ಖಾತೆಯಿಂದ ಮೆಸೇಜ್

voiceoftulunadu

Leave a Comment