28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪರಿಮಳದ ಬಾಕಿ ಮೊತ್ತ ಕೃತಿಗೆ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ 2026 : ಬೆಂಗಳೂರಿನ ಕವಿ ಡಾ. ಲಕ್ಷ್ಮಣ್ ವಿ. ಎ. ಅವರ ಕವನ ಸಂಕಲನ;

ವರದಿ/ ಚಿತ್ರ: ಈ ಮೀಡಿಯಾ

‘ಉಡುಪಿ: ವಿಶ್ವ ಭಾರತಿ ಕರ್ನಾಟಕ ಅವರ ಪ್ರತಿಷ್ಠಾನ, ಬೆನಗಲ್ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.), ಉಡುಪಿ ನೀಡುವ ಕವಿ ಕುರಾಡಿ ಸೀತಾರಾಮ ಅಡಿಗ ನೆನಪಿನ ಕಾವ್ಯ ಪ್ರಶಸ್ತಿ-2026ಕ್ಕೆ ಬೆಂಗಳೂರಿನ ಕವಿ ಡಾ. ಲಕ್ಷ್ಮಣ್ ವಿ. ಎ. ಅವರ ‘ಪರಿಮಳದ ಬಾಕಿ ಮೊತ್ತ’ ಕವನ ಸಂಕಲನ ಆಯ್ಕೆಯಾಗಿದೆ.ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.), ಉಡುಪಿ ಸಂಸ್ಥೆಯು 2025ರಲ್ಲಿ ಪ್ರಕಟಗೊಂಡ ಕವನ ಸಂಕಲನಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಿತ್ತು.

ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 71 ಕವನ ಸಂಕಲನಗಳು ಸ್ಪರ್ಧೆಗೆ ಬಂದಿದ್ದವು.ಕನ್ನಡ ಸಾಹಿತ್ಯ ಲೋಕದ ಹಿರಿಯ ವಿಮರ್ಶಕ ಹಾಗೂ ಸಂಸ್ಕೃತಿ ಚಿಂತಕ ಪ್ರೊ. 225. ದಂಡಪ್ಪ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿ, ‘ಪರಿಮಳದ 2008 ಮೊತ್ತ’ಕವನ ಸಂಕಲನವನ್ನು ಪ್ರಶಸ್ತಿಗೆ ಆಯ್ಕೆಮಾಡಿದ್ದಾರೆ.ಪ್ರಶಸ್ತಿಯು ₹10,000 ನಗದು ಗೌರವಧನ, ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ಒಳಗೊಂಡಿರುತ್ತದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ 2026ರಲ್ಲಿ ನಡೆಯಲಿದೆ ಎಂದು ಪ್ರಶಸ್ತಿ ಸಮಿತಿಯ ಸಂಚಾಲಕಿ ಶ್ರೀಮತಿ ಪೂರ್ಣಿಮಾ ಜನಾರ್ದನ ತಿಳಿಸಿದ್ದಾರೆ.ಡಾ. ಲಕ್ಷಣ್ ವಿ. ಎ. – ಪರಿಚಯಡಾ. ಲಕ್ಷ್ಮಣ್ ವಿಠೋಬ ಅಟಪಟಕರ ಅವರು 1 ಜುಲೈ 1977ರಂದು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ಜನಿಸಿದರು.ಆಯುರ್ವೇದ ವೈದ್ಯರಾಗಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿರುವ ಅವರು ಕವಿ, ಕಥೆಗಾರ ಹಾಗೂ ಅಂಕಣಕಾರರಾಗಿ ಕನ್ನಡ ಸಾಹಿತ್ಯದಲ್ಲಿ ಗುರುತಿಸಿಕೊಂಡಿದ್ದಾರೆ.

ವಿಜಯ ಕರ್ನಾಟಕ ಪತ್ರಿಕೆಯ ಜನಪ್ರಿಯ ‘ವೈದ್ಯ ವಿಸ್ಮಯ’ ಅಂಕಣದ ಲೇಖಕರಾಗಿದ್ದಾರೆ.ಪ್ರಮುಖ ಕೃತಿಗಳುಎಲೆಕ್ನಿಕ್ ಬೇಲಿ ಮತ್ತು ಪಾರಿವಾಳ, ‘ಅಪ್ಪನ ಅಂಗಿ’, ‘ಕಾಯಿನ್ ಬೂತ್’, ‘ಪರಿಮಳದ ಬಾಕಿ ಮೊತ್ತ’, ‘ಪಿ.ಎಚ್.ಸಿ. ಕವಲುಗುಡ್ಡ’ಸೇರಿದಂತೆ ಒಟ್ಟು 11 ಕೃತಿಗಳು ಪ್ರಕಟಗೊಂಡಿವೆ.

ಪ್ರಮುಖ ಪ್ರಶಸ್ತಿಗಳು,ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ‘ಕಾಯಿನ್ ಬೂತ್’ಈ ಹೊತ್ತಿಗೆ’ ಕಾವ್ಯ ಪುರಸ್ಕಾರ – ‘ಪರಿಮಳದ ಬಾಕಿ ಮೊತ್ತ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ-2026 ‘ಪರಿಮಳದ ಬಾಕಿ ಮೊತ್ತ’ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ-2026, ಪ್ರಜಾವಾಣಿ ದೀಪಾವಳಿ ಕವನ ಸ್ಪರ್ಧೆ – ಪ್ರಥಮ ಬಹುಮಾನ ಪಡೆದಿದೆ.ಅವರ ಎರಡು ಕಥೆಗಳು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಸೇರಿದಂತೆ ವಿಶ್ವವಿದ್ಯಾಲಯಗಳ ಪಠ್ಯಕ್ರಮದಲ್ಲಿ ಸೇರಿಸಲ್ಪಟ್ಟಿವೆ.

Related posts

ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ: ಇನ್ನಂಜೆ ಎಸ್.ವಿ.ಎಚ್. ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟಎಸ್.ವಿ.ಎಚ್ ಪದವಿಪೂರ್ವ ಕಾಲೇಜು ಇನ್ನಂಜೆ ;

Voiceoftulunadu

ಕುಂದಾಪುರ ಚರ್ಚ್ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ: ಹೆಬ್ರಿ ಗಿಲ್ಲಾಳಿ ನಿವಾಸಿ ಐವನ್ ರಿಚರ್ಡ್ (ಮುನ್ನ) ಹತ್ಯೆಗೀಡಾದ ವ್ಯಕ್ತಿ ;

Voiceoftulunadu

ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳ: ಪಕ್ಷಾತೀತ ಯುವ ನಾಯಕರ ಒಕ್ಕೂಟ ಸನ್ನದ್ಧ;

Voiceoftulunadu

Leave a Comment