28.5 C
ಮಂಗಳೂರು
September 4, 2026
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಪ್ರತೀ ಮತದಾರರ ಹಕ್ಕನ್ನು ಪ್ರತಿನಿಧಿಸೋಣ : ಇನಾಯತ್ ಅಲಿ;

ವರದಿ/ ಚಿತ್ರ:ರೋಶನ್ ನೆಲ್ಲಿಗುಡ್ಡೆ

ಮೂಲ್ಕಿ : ಬೂತ್ ಮಟ್ಟದ ಏಜೆಂಟರು ಕೇವಲ ಪಕ್ಷದ ಕಾರ್ಯಕರ್ತರಲ್ಲ, ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು. ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಿ, ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕು ರಕ್ಷಿಸುವ ಜವಾಬ್ದಾರಿ ಇದೆ. ಚುನಾವಣೆಗಳು ಸಾಮಾಜಿಕ ಜಾಲತಾಣಗಳಲ್ಲಿ ಗೆಲ್ಲುವುದಿಲ್ಲ; ಮನೆ ಮನೆಗೆ ತಲುಪಿ, ಪ್ರತಿಯೊಂದು ಮತವನ್ನು ರಕ್ಷಿಸುವ ಮೂಲಕವೇ ಗೆಲುವು ಸಾಧ್ಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹೇಳಿದರು.

ಅವರು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೂತ್ ಮಟ್ಟದ ಏಜೆಂಟರ (BLA)ಗಾಗಿ ಆಯೋಜಿಸಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಏಜೆಂಟರು ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಹಾಗೂ ಯಾವುದೇ ಲೋಪಗಳು ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.ಮಾಜಿ ಸಚಿವ ಬಿ. ರಮಾನಾಥ ರೈ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿದರು.ಸುಮಾರು 250ಕ್ಕೂ ಅಧಿಕ ಬೂತ್ ಮಟ್ಟದ ಏಜೆಂಟರು ತರಬೇತಿಯಲ್ಲಿ ಭಾಗವಹಿಸಿದ್ದರು.

ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಲ್. ಪದ್ಮನಾಭ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಮಂಗಳೂರು ಉತ್ತರ ಯುವ ಕಾಂಗ್ರೆಸ್ ಅಧ್ಯಕ್ಷ ರೂಪೇಶ್ ರೈ, ಮಾಜಿ ಮೇಯರ್ ಶಶಿಧರ್ ಹೆಗಡೆ, ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಗಿರೀಶ್ ಆಳ್ವ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಮೆಲ್ವಿನ್ ಡಿಸೋಜಾ, ಯು.ಪಿ. ಇಬ್ರಾಹಿಂ, ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಸಹಿತ ಹಲವಾರು ಮುಖಂಡರು ಇದ್ದರು.

Related posts

ಶ್ರೀಕೇತ್ರ ಪೊಳಲಿಗೆ ಶೃಂಗೇರಿ ಮಠದ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳ ಭೇಟಿ ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಿದ ಆಡಳಿತ ಮಂಡಳಿ;

Voiceoftulunadu

ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದ ಡಾ. ಶ್ರೀಕಾಂತ್ ಶಿಂಧೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ : ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವ;

Voiceoftulunadu

ಗ್ರಾಹಕರಿಗೆ ನೀಡುವ ಪ್ರಾಮಾಣಿಕ ಸೇವೆಯಿಂದ ಆತ್ಮತೃಪ್ತಿ ಲಭಿಸಲಿದೆ: ಪ್ರಭಾಕರ ಪ್ರಭು.

Voiceoftulunadu

Leave a Comment