27 C
ಮಂಗಳೂರು
July 6, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ಸ್ ಹಾಸ್ಟೆಲ್ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಗಣೇಶೋತ್ಸವ ಸಮಿತಿಯ ಸಂಚಾಲಕರಾಗಿ ಜಯಶೀಲ ಅಡ್ಯಾಂತಾಯ ಅಡ್ಯಾರ್‌ಗುತ್ತು ಆಯ್ಕೆ;

ಮಂಗಳೂರು, ಜು. 2- ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನಲ್ಲಿ ಸೆಪ್ಟೆಂಬರ್ 14ರಿಂದ ಸೆಪ್ಟೆಂಬರ್ 16ರ ವರೆಗೆ ನಡೆಯಲಿರುವ 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸಂಚಾಲಕರಾಗಿ ಉದ್ಯಮಿ, ಸಮಾಜಸೇವಕ ಜಯಶೀಲ ಅಡ್ಡಾಂತಾಯ ಅಡ್ಕಾರ್‌ಗುತ್ತು ಆಯ್ಕೆಯಾದರು.

ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆ ಬಂಟ್ಸ್ ಹಾಸ್ಟೆಲ್‌ನ ಅಮೃತೋತ್ಸವ ಕಟ್ಟಡದಲ್ಲಿ ಟ್ರಸ್ಟ್‌ನ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಚಾಲಕರ ಆಯ್ಕೆ ಪ್ರಕ್ರಿಯೆ ನಡೆಯಿತು.

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ, ಪ್ರಧಾನ ಕಾರ್ಯದರ್ಶಿ ಎಮ್. ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್‌ ಮೋಹನ್ ರೈ, ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣಪ್ರಸಾದ್ ರೈ, ಕಾರ್ಯಕಾರಿ ಸಮಿತಿ ಸದಸ್ಯರಾದ ಎಮ್. ಸುಂದರ ಶೆಟ್ಟಿ,ವಸಂತ ಶೆಟ್ಟಿ ಜೆಪ್ಪು, ಪದವು ಮೇಗಿನಮನೆ ಉಮೇಶ್ ರೈ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ರತ್ನಾಕರ ಶೆಟ್ಟಿ ಎಕ್ಕಾರು, ಮನೀಶ್ ರೈ ಅಡ್ಕಾರು, ಜಗದೀಶ್ ಶೆಟ್ಟಿ ಬಿಜೈ ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ದಿವಾಕರ ಸಾಮಾನಿ ಚೇಳ್ಯಾರು ಗುತ್ತು ಮತ್ತಿತರರು ಉಪಸ್ಥಿತರಿದ್ದರು.

ಜಯಶೀಲ ಅಡ್ಕಂತಾಯ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ನ ಟ್ರಸ್ಟಿಯಾಗಿ, ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿ, ಎಪಿಎಂಸಿಯ ಸದಸ್ಯರಾಗಿ, ದ. ಕ. ಜಿಲ್ಲಾ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿ, ಅಡ್ಯಾರು ಪಕ್ಷಿಕೃಷ್ಣ ಮಹಾವಿಷ್ಣು ದೇವಸ್ಥಾನದ ಕೋಶಾಧಿಕಾರಿಯಾಗಿ, ಬಂಟರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿ ಸದಸ್ಯರಾಗಿ, ಅಡ್ಯಾರು ಗ್ರಾಮ ಪಂಚಾಯತ್ ಸದಸ್ಯರಾಗಿ ದುಡಿದವರು.

ಅಡ್ಯಾರು ಫ್ಯಾಮಿಲಿ ಟ್ರಸ್ಟ್‌ ನ ಉಪಾಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸುತ್ತಿರುವ ಜಯಶೀಲ ಅಡ್ಯಂತಾಯ, ಬಂಟ್ಸ್ ಹಾಸ್ಟೆಲ್ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಗಣೇಶೋತ್ಸವ ಸಮಿತಿಯ ಸಂಚಾಲಕರಾಗಿ ಆಯ್ಕೆಯಾಗಿ, ಗಣೇಶನ ಸೇವೆ ಮಾಡಲು ಒಂದು ಅವಕಾಶ ದೊರೆತಿದೆ. ಎಲ್ಲರೂ ಸಹಕಾರಿ ನೀಡಿ ಗಣೇಶೋತ್ಸವವನ್ನು ಯಶಸ್ವಿಗೊಳಿಸೋಣ ಎಂದರು.

Related posts

ಬೆಂಗಳೂರು ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ಜುಲೈ 11ರಂದು ತುಳು ಯಕ್ಷಗಾನ ಕಾರ್ಯಾಗಾರ ;

Voiceoftulunadu

ಜುಲೈ ೦೨ ರಂದು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮೂಡುಶೆಡ್ಡೆ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ;ಕಲ್ಯಾಣ್ ಲೋಕಸಭಾ ಸಂಸದ ಡಾ| ಶ್ರೀಕಾಂತ್ ಏಕನಾಥ ಶಿಂಧೆ ಅವರಿಗೆ ಆಹ್ವಾನ:

voiceoftulunadu

ತೀರ್ಥಹಳ್ಳಿ ಮೂಲದ ಬರಹಗಾರರಾದ ಜಿ ಟಿ ನಂದೀಶ್ ಹೃದಯಾಘಾತದಿಂದ ನಿಧನ:

voiceoftulunadu

Leave a Comment