
ಮಂಗಳೂರು : “ಆಪರೇಷನ್ ರೈಸ್” ಹಾಗೂ “ಬೇಡ ಬ್ರೋ” ಉಪಕ್ರಮಗಳಡಿ ಮಾದಕ ವಸ್ತುಗಳ ವಿರುದ್ಧ ರಾಜ್ಯವ್ಯಾಪಿ ಜಾಗೃತಿ ಅಭಿಯಾನದ ಅಂಗವಾಗಿ ಇಂದು ಮಂಗಳೂರು ನಗರ ಪೊಲೀಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಸನ್ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಯು.ಟಿ. ಖಾದರ್ ಫರೀದ್ ಅವರು ಉದ್ಘಾಟಿಸಿದರು, ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಿಂದ ಸುಮಾರು 2,000 ವಿದ್ಯಾರ್ಥಿಗಳು, ಶಾಲಾ ಮುಖ್ಯಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಮಾದಕ ವಸ್ತುಗಳ ವಿರುದ್ಧ ಪ್ರತಿಜ್ಞೆ ಸ್ವೀಕರಿಸಿದರು.

ಅಲ್ಲದೆ, ವಿವಿಧ ಇಲಾಖೆಗಳ ತಜ್ಞರು ಭಾಗವಹಿಸಿದ Panel Discussion ಮೂಲಕ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ, ವ್ಯಸನದಿಂದ ದೂರವಿರುವಂತೆ ಸಂದೇಶ ನೀಡಲಾಯಿತು.


