28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಾಜಿ ಸಚಿವ ಸಿ.ಟಿ. ರವಿ ಯವರಿಗೆ ನೋಟೀಸ್ ಪ್ರಕರಣ: ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ರಾಜ್ಯ ಕಾಂಗ್ರೆಸ್‌ ಸರಕಾರ :ಯಶ್ವಾಲ್ ಸುವರ್ಣ;

ವರದಿ/ ಚಿತ್ರ :ಈ ಮೀಡಿಯಾ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಗೃಹ ಇಲಾಖೆ ಅಲ್ಪಸಂಖ್ಯಾತರ ತುಷ್ಟಿಕರಣ ಇಲಾಖೆಯಾಗಿ ಪರಿವರ್ತನೆಯಾಗಿದ್ದು, ಮತೀಯವಾದಿ ಶಕ್ತಿಗಳ ಕೈಗೊಂಬೆಯಾಗಿ ಮಾಜಿ ಸಚಿವ ಸಿ. ಟಿ. ರವಿ ಯವರಿಗೆ ಪೊಲೀಸ್ ಇಲಾಖೆ ನೀಡುವ ಮೂಲಕ ರಾಜ್ಯದ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರು ದಿನಬೆಳಗಾದರೆ ಆರ್ ಎಸ್ ಎಸ್ ವಿರುದ್ಧ ಹೇಳಿಕೆ ನೀಡುವುದನ್ನೇ ದಿನಚರಿಯಾಗಿ ಮಾಡಿಕೊಂಡಿದ್ದಾರೆ. ಪೊಲೀಸ್ ಇಲಾಖೆಯನ್ನು ಕೈಗೊಂಬೆಯನ್ನಾಗಿಸಿಕಾಂಗ್ರೆಸ್ ಪಕ್ಷದ ಕಾರ್ಯಕರ್ತರಂತೆ ಕಾಂಗ್ರೆಸ್ ಮುಖಂಡರ ಅಣತಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪೊಲೀಸರು ರಾಜ್ಯದಲ್ಲಿ ರಾಷ್ಟ್ರ ವಿರೋಧಿ ಶಕ್ತಿಗಳು ನೀಟ್ ಪರೀಕ್ಷೆಯ ನೆಪದಲ್ಲಿ ವಿದ್ಯಾರ್ಥಿಗಳ ಮುಖವಾಡ ಧರಿಸಿ ಪ್ರತಿಭಟನೆ ನಡೆಸಿ ಉಗ್ರರ ಪರ ಜೈಕಾರ ಹಾಕುತ್ತಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದರೂ, ಯಾವುದೇ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆ ಸಿ. ಟಿ. ರವಿ ವಿರುದ್ಧ ನೋಟೀಸ್ ನೀಡಲು ತುದಿಗಾಲಲ್ಲಿ ನಿಂತಿದೆ.ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಡೆಗೆಟ್ಟಿದ್ದರೂ ಯಾವುದೇಕಠಿಣ ಕ್ರಮವಹಿಸದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಮತೀಯ ಶಕ್ತಿಗಳ ಓಲೈಕೆಗಾಗಿ ಮಾಜಿ ಸಚಿವರ ವಿರುದ್ಧ ನೋಟೀಸ್ ನೀಡಲು ಮುಂದಾಗಿದ್ದಾರೆ.

ವಿನಾಶಕಾಲೇ ವಿಪರೀತ ಬುದ್ದಿ ಎಂಬಂತೆ ರಾಜ್ಯ ಸರ್ಕಾರ ಹದ್ದು ಮೀರಿ ವರ್ತಿಸುತ್ತಿದ್ದು, ರಾಜ್ಯದ ರಾಷ್ಟ್ರೀಯವಾದಿ ಚಿಂತನೆಯ ಜನತೆಯ ಸಿ. ಟಿ. ರವಿ ಯವರ ಜೊತೆ ನಿಲ್ಲಲಿದ್ದು, ಇಂತಹ ಸಾವಿರ ನೋಟಿಸುಗಳಿಂದಲೂ ನಾಯಕರ ಹೋರಾಟದ ಮನಸ್ಥಿತಿಯನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

Related posts

ಯುಎಇಯಲ್ಲಿ 30ನೇ ವರ್ಷಕ್ಕೆ ಕಾಲಿಟ್ಟ ತುಂಬೆ ಗ್ರೂಪ್;

Voiceoftulunadu

ಸಾಸ್ತಾನ ದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ : ಸುಮಾರು 18 ದಿನಗಳ ಕಾಲ ನಡೆಯಲಿರುವ ಪಾದಯಾತ್ರೆ;

Voiceoftulunadu

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲ : ಆಟಿಡೊಂಜಿ ದಿನ ಕಾರ್ಯಕ್ರಮ ಉದ್ಘಾಟಿಸಿದ ಜಿ.ಪಂ. ಮಾಜಿ ಉಪಾಧ್ಯಕ್ಷೆ ಎರ್ಮಾಳು ಶೀಲಾ ಕೆ. ಶೆಟ್ಟಿ.”ಆಟಿಡೊಂಜಿ ದಿನ” ;

Voiceoftulunadu

Leave a Comment