September 5, 2026
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಡುಬೆಳ್ಳೆ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಯು. ಎಲ್. ಭಟ್;

ವರದಿ /ಚಿತ್ರ:ಈ ಮೀಡಿಯಾ

ಮೂಡುಬೆಳ್ಳೆ : ಮೂಡುಬೆಳ್ಳೆ ಸಮೀಪದನೆಲ್ಲಿಕಟ್ಟೆಯ ಜ್ಞಾನಗಂಗಾ ಪದವಿ 2026-273 ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಯು. ಎಲ್. ಭಟ್ ಉದ್ಘಾಟಿಸಿದರು.

ಈ ಸಂದರ್ಭ ಅವರು ಮಾತನಾಡಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ವಿವಿಧ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಬೇಕು. ಪರಿಶ್ರಮ, ಶಿಸ್ತು ಹಾಗೂ ಸಮರ್ಪಣಾ ಮನೋಭಾವದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಅಂಕಗಳನ್ನು ಗಳಿಸಿ ಜೀವನದಲ್ಲಿ ಯಶಸ್ಸು ಸಾಧಿಸಬೇಕುಎಂದು ಶುಭ ಹಾರೈಸಿದರು.ಅಧ್ಯಕ್ಷತೆ ಆಡಳಿತ ಕಾರ್ಯಕ್ರಮದ ವಹಿಸಿದ್ದ ಕಾಲೇಜಿನ ಮಂಡಳಿಯ ಪ್ರಭಾರ ಕಾರ್ಯದರ್ಶಿ ಪ್ರಭಾಕರ್ ಕೆ. ಎಸ್. ಮಾತನಾಡಿ, ವಿದ್ಯಾಭ್ಯಾಸದೊಂದಿಗೆ ಜವಾಬ್ದಾರಿಯುತ ನಾಯಕತ್ವ, ಶಿಸ್ತು ಮತ್ತು ಪರಿಶ್ರಮವನ್ನು ಅಳವಡಿಸಿಕೊಂಡರೆ ಜೀವನದಲ್ಲಿ ಉತ್ತಮ ಸ್ಥಾನಮಾನವನ್ನು ಪಡೆಯಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದರು.

ಉಪಪ್ರಾಂಶುಪಾಲ ಭಾಸ್ಕರ ಆಚಾರ್ಯ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ನೂತನ ವಿದ್ಯಾರ್ಥಿ ನಾಯಕರುಗಳಾದ ವಾಣಿಜ್ಯವಿಭಾಗದ ಆಸ್ಟನ್ ಸೆಲ್ವಿನ್‌ ಡಿ’ಸೋಜಾ ಹಾಗೂ ವಿಜ್ಞಾನ ವಿಭಾಗದ ನವ್ಯ ವಸಂತ್ ಶೆಟ್ಟಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕಾಲೇಜಿನ ಪ್ರಾಂಶುಪಾಲೆ ಡಾ. ಲೀನಾ ಎಸ್. ನಾಯ್ಕ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಮೂಲಕ ಹಮ್ಮಿಕೊಳ್ಳಲಾಗುವ ವಿವಿಧ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ನಾಯಕತ್ವ ಬೆಳೆಸುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಶ್ರಾವ್ಯಾ ಹಾಗೂ ಕ್ಷಮಾ ಕಾರ್ಯಕ್ರಮ ನಿರೂಪಿಸಿದರು. ಆಸ್ಟನ್ ಸೆಲ್ವಿನ್ ಡಿ’ಸೋಜಾ ವಂದಿಸಿದರು.

Related posts

ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ – ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರ ರಾಮಲಿಂಗಾ ರೆಡ್ಡಿ?

voiceoftulunadu

ವಾಹನದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕೊಕೈನ್ ಸಾಗಾಟ ಪತ್ತೆ : ಬೆಂಗಳೂರು ಕೆಂಗೇರಿ ಮೂಲದ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್‌ ಪೊಲೀಸ್‌ ವಶ ;

Voiceoftulunadu

ತುಳುನಾಡ ಸಾಂಸ್ಕೃತಿಕ ಪತ್ರಿಕೋದ್ಯಮದ ವಿಶಿಷ್ಟ ಧ್ವನಿ ಪರಮಾನಂದ ಸಾಲ್ಯಾನ್ ಇನ್ನಿಲ್ಲ;

Voiceoftulunadu

Leave a Comment