28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಶಿರ್ವ ಸಹಕಾರಿ ವ್ಯವಸಾಯಿಕ ಸಂಘ : “ಏಕ್ ಫೆಡ್ ಮಾ ಕೆ ನಾಮ್” ಕಾರ್ಯಕ್ರಮಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಆಚರಣೆ ;

ವರದಿ/ ಚಿತ್ರ: ಈ ಮೀಡಿಯಾ

ಶಿರ್ವ: ಕರ್ನಾಟಕ ರಾಜ್ಯ ಸಹಕಾರ ಮಂಡಳ ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಜಂಟಿ ಸಹಯೋಗದಲ್ಲಿ ಕೇಂದ್ರ ಸರಕಾರದ ನೂತನ ಸಹಕಾರಿ ಇಲಾಖೆಗೆ ಐದು ವರ್ಷಗಳು ತುಂಬಿದ ನಿಟ್ಟಿನಲ್ಲಿ ನಡೆಯುತ್ತಿರುವ ವಿಶೇಷ ಸಹಕಾರ ಸಪ್ತಾಹದ ಅನ್ವಯ ”ಏಕ್ ಫೆಡ್ ಮಾ ಕೆ ನಾಮ್ ” ಘೋಷಣೆ ಯೊಂದಿಗೆ ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು.

ಜಿಲ್ಲೆಯ ಸಹಕಾರ ಸಂಘಗಳ ಉಪ ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮವನ್ನು, ಉಡುಪಿನಿಬಂಧಕರಾದ ಶ್ರೀಮತಿ ಕೆ ಆರ್. ಲಾವಣ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಅವರು ಪ್ರಧಾನ ಸಂದೇಶನೀಡಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ವೀರೇಂದ್ರ ಪಾಟ್ಕರ್, ಕುತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜನಾರ್ಧನ ಆಚಾರ್ಯ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸವಿತ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅನುಷಾ ಕೋಟ್ಯಾನ್, ಸಂಘದನಿರ್ದೇಶಕರಾದ ಶ್ರೀಮತಿ ವಾರಿಜಾ ಪೂಜಾರಿ, ಉಮೇಶ್ ಆಚಾರ್ಯ, ಹರಿಣಾಕ್ಷ ಶೆಟ್ಟಿ ಮತ್ತು ಗಣೇಶ ನಾಯಕ, ಶಾಲಾಭಿವೃದ್ಧಿ ಸಮಿತಿಯ ಕಿಶೋರ್ ಶೆಟ್ಟಿ, ಸಾಯಿನಾಥ ಶೆಟ್ಟಿ, ಅಬೂಬಕ್ಕರ್ ಮತ್ತು ಶ್ರೀಮತಿ ಗೀತಾನಾಯ್ಕ, ಶಾಲಾ ಶಿಕ್ಷಕಿಯರು ಮತ್ತು ಶಾಲಾ ಮಕ್ಕಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹಣ್ಣು ಬಿಡುವ ಮರಗಳ ಗಿಡಗಳನ್ನು ವಿತರಿಸಲಾಯಿತು.ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಸಂಘದ ಮುಖ್ಯ ಆಚಾರ್ಯ ಸ್ವಾಗತಿಸಿದರು. ಪ್ರಧಾನ ಲೆಕ್ಕಿಗ ಹರೀಶ್ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಹಿರಿಯ ಶಾಖಾ ವ್ಯವಸ್ಥಾಪಕಿ ಶ್ರೀಮತಿ ಸುಮಾ ಶೆಟ್ಟಿ ವಂದಿಸಿದರು.

Related posts

ಜೈನಕಾಶಿ ಮೂಡಬಿದಿರೆ ಇದರ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ ಯೋಗ ಪ್ರಾತ್ಯಕ್ಷಿಕೆಯೋಗಾಸನಗೈದ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ  ;

Voiceoftulunadu

ಕಟಪಾಡಿ: ಅಚ್ಚಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ LKG ತರಗತಿ ಉದ್ಘಾಟನೆ ತರಗತಿ ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ

Voiceoftulunadu

ಅಡ್ಯಾರ್‌ನಲ್ಲಿ ೧೧ನೇ ವರ್ಷದ ಪಟ್ಲ ಸಂಭ್ರಮ ೨೦೨೬, ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ

Voiceoftulunadu

Leave a Comment