ವರದಿ/ ಚಿತ್ರ: ದಿತೇಶ್ ಮಂಗಳೂರು
ಮಂಗಳೂರು: ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಮೂಡುಬಿದಿರೆ ತಾಲೂಕು ಕಚೇರಿ ಗಳಿಗೆ ದಾಳಿ ನಡೆಸಿದ್ದಾರೆ. ಮಂಗ ಳೂರು, ಉಡುಪಿ ಹಾಗೂ ಕಾರವಾರ ಲೋಕಾಯುಕ್ತ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕು ಕಚೇರಿ – ಯಲ್ಲಿರುವ ಕಂದಾಯ ವಿಭಾಗದ ಕಚೇರಿಗೆ ದಾಳಿ ನಡೆಸಲಾಗಿದೆ. – ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಆರೋಪದ ಮಾಡುತ್ತಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗಿನಿಂದಲೇ ದಾಳಿ ಕಾರ್ಯಾ ಚರಣೆ ನಡೆಸಿದ್ದಾರೆ.
ಮಾರ್ಗದರ್ಶನದಲ್ಲಿ ಬೆಳ್ತಂಗಡಿ ತಾಲೂಕು ಕಚೇರಿಗೆ ಇನ್ಸ್‌ಪೆಕ್ಟರ್ ವಿನಾಯಕ ಬಿಲ್ಲವ ನೇತೃತ್ವದಲ್ಲಿ ಏಳು ಮಂದಿಯ ತಂಡ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದೆ. ಕಂದಾಯ ಇಲಾಖೆಯ ದಾಖಲೆಗಳನ್ನು ದಾಖಲೆಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು ಲಂಚದ ಆರೋಪಕ್ಕೆ ಸಂಬಂಧಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
