28.5 C
ಮಂಗಳೂರು
September 4, 2026
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸ

ಸಿಐಡಿ ವರದಿ ಟ್ರಾನ್ಸ್‌ಲೇಟ್‌ ಮಾಡಿದ್ದನ್ನ ಬಿಟ್ಟು ಮತ್ತೇನು ಮಾಡಿದ್ದೀರಿ: ಧರ್ಮಸ್ಥಳ ಸೌಜನ್ಯ ಕೇಸಿನ ವಿಚಾರದಲ್ಲಿ ಸಿಬಿಐಗೆ ಸುಪ್ರೀಂ ಕೋರ್ಟ್ ಚಾಟಿ;

ವರದಿ /ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ

ಭಾರಿ ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಪೀಠವು ತನ್ನ ಆದೇಶವನ್ನು ಕಾಯ್ದಿರಿಸಿದೆ. ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು.

ಮರು ತನಿಖೆಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಪೀಠ :

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು, ತನಿಖೆಯನ್ನು ಯಾವ ಸ್ವರೂಪದಲ್ಲಿ ನಡೆಸಬೇಕು ಎನ್ನುವುದರ ಕುರಿತು ತನ್ನ ತೀರ್ಪನ್ನು ಕಾಯ್ದಿರಿಸಿದೆ. ಅಂತಿಮ ಆದೇಶದಲ್ಲಿ ಈ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಸ್ತೃತವಾದ ನಿರ್ದೇಶನಗಳನ್ನು ನೀಡಲಿದೆ.ಸಿಬಿಐ ತನಿಖಾ ವೈಫಲ್ಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ತರಾಟೆವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸಿಬಿಐ (CBI) ಕಾರ್ಯವೈಖರಿಯನ್ನು ಕಟುವಾಗಿ ತರಾಟೆಗೆ ತೆಗೆದುಕೊಂಡಿತು.

ಪ್ರಕರಣ ನಡೆದು 14 ವರ್ಷಗಳಾಗಿದ್ದರೂ ಸರಿಯಾದ ತನಿಖೆ ನಡೆದಿಲ್ಲ. ಸಿಐಡಿ ನೀಡಿದ್ದ ವರದಿಯನ್ನಷ್ಟೇ ಭಾಷಾಂತರಿಸಲಾಗಿದೆ ಹೊರತು, ತನಿಖಾಧಿಕಾರಿ ಘಟನಾ ಸ್ಥಳಕ್ಕೂ ಭೇಟಿ ನೀಡಿಲ್ಲ. ಕೆಳಹಂತದ ನ್ಯಾಯಾಲಯದಲ್ಲಿ ಇನ್ನು ಕೆಲ ಆರೋಪಿಗಳ ವಿರುದ್ಧ ತನಿಖೆ ನಡೆಸಬೇಕಿದೆ ಎಂದು ಹೇಳಿದ್ದ ಸಿಬಿಐ, ಈಗ ಸಿಬ್ಬಂದಿ ಹಾಗೂ ಹಣಕಾಸಿನ ಕೊರತೆ ಎಂದು ನೆಪ ಹೇಳುತ್ತಿರುವುದು ಸಮಂಜಸವಲ್ಲ ಎಂದು ಕೋರ್ಟ್ ಕಿಡಿಕಾರಿತು.

ಎಸ್‌ಐಟಿ (SIT) ರಚನೆಗೆ ರಾಜ್ಯ ಸರ್ಕಾರ ಸಿದ್ಧಸೌಜನ್ಯ ತಾಯಿ ಕುಸುಮಾವತಿ ಅವರು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ, ವಿಶೇಷ ತನಿಖಾ ತಂಡ (SIT) ರಚಿಸಿ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ತಾವು ಸಿದ್ಧರಿರುವುದಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.ಎಸ್‌ಐಟಿ ರಚನೆ ಕುರಿತು ಸುಪ್ರೀಂ ನಿರ್ಧಾರಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಬೇಕೇ ಅಥವಾ ಇತರ ಯಾವುದೇ ಸಂಸ್ಥೆಗೆ ವಹಿಸಬೇಕೇ ಎಂಬುದನ್ನು ತಾನೇ ನಿರ್ಧರಿಸುವುದಾಗಿ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಅಲ್ಲದೆ, ಆದೇಶ ಪ್ರಕಟಿಸಿದ ಬಳಿಕ ಈ ತನಿಖೆಗೆ ಸಂಬಂಧಿಸಿದಂತೆ ಮಧ್ಯಂತರ ವರದಿಯನ್ನು ಕೇಳುವುದಾಗಿ ನ್ಯಾಯಪೀಠ ಹೇಳಿದೆ.ಸಾಕ್ಷಿಗಳಿಗೆ ಭದ್ರತೆ ಮುಂದುವರಿಕೆಗೆ ಸೂಚನೆಪ್ರಕರಣ ನಡೆದ ಇಷ್ಟೂ ವರ್ಷಗಳಲ್ಲಿ ಸಾಕ್ಷ್ಯಗಳು ನಾಶವಾಗದಂತೆ ಮತ್ತು ಸಾಕ್ಷಿಗಳಿಗೆ ಯಾವುದೇ ಅಪಾಯ ಎದುರಾಗದಂತೆ ಅವರಿಗೆ ನೀಡಲಾಗಿರುವ ಭದ್ರತೆಯನ್ನು ಮುಂದುವರಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

Related posts

ಜಗಜ್ಯೋತಿ ಕಲಾವೃಂದ ಸಂಸ್ಥೆಯಿಂದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕಅಖಿಲ ಭಾರತ ಮಟ್ಟದ ಕಥೆ ಹಾಗೂ ಕವಿತಾ ಪ್ರಶಸ್ತಿಗಳ ಸ್ಪರ್ಧೆಗೆ ಆಹ್ವಾನ

voiceoftulunadu

ಸೌದಿಯಲ್ಲಿ ಹೃದಯಾಘಾತದಿಂದ ಪಡುಬಿದ್ರಿಯ ಉದ್ಯಮಿ ನಿಧನ:ಪಡುಬಿದ್ರಿ ದೀನ್ ಸ್ಟ್ರೀಟ್ ನಿವಾಸಿ ರಿಯಾಝ್ ಮೃತ ಯುವಕ;

Voiceoftulunadu

ಕಾಪು ಕಡಲೊರೆತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ ::ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಯುಟಿ ಖಾದ‌ರ್ ;

Voiceoftulunadu

Leave a Comment